ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಚೇತನ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಸಂಜೆವಾಣಿ ವಾರ್ತೆ
ಕೊಳ್ಳೇಗಾಲ ಆ 4 :- ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಚೇತನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ಕೋಕೋದಲ್ಲಿ ಪ್ರಥಮ ಸ್ಥಾನ ಸಂದೀಪ್ ಮತ್ತು ತಂಡ. ವಿದ್ಯಾರ್ಥಿನಿಯರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಅಶ್ವಿನಿ ಮತ್ತು ತಂಡ, ತಟ್ಟೆ ಎಸೆತದಲ್ಲಿ ಆಶಾ ಪ್ರಥಮ ಸ್ಥಾನ, ಜಾವೆಲಿನ್ ಎಸೆತದಲ್ಲಿ ಸುಪ್ರೀತಾ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ, ಆಶಾ ಮತ್ತು ತಂಡ, ಚೆಸ್ ಸ್ಪರ್ಧೆಯಲ್ಲಿ ರವಿ ದ್ವಿತೀಯ ಸ್ಥಾನ, ಗುಂಡು ಎಸೆತದಲ್ಲಿ ಆಶಾ ತೃತೀಯ ಸ್ಥಾನ, ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ಜಾವಲೀನ್ ಎಸೆತದಲ್ಲಿ ಕೌಶಲ್ಯ ತೃತೀಯ ಸ್ಥಾನ ಪಡೆದಿದ್ದಾರೆ.
ಹೀಗೆ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿಯವರಾದ ಶ್ರೀಮತಿ ಪ್ರೇಮಲತಾ ಕೃಷ್ಣಸ್ವಾಮಿ ರವರು ಸಂಯೋಜಕ ರಾಜೇಶ್, ಜಗದೀಶ್, ಪ್ರಾಂಶುಪಾಲರಾದ ಭಾಸ್ಕರನ್. ಎಸ್ ರವರು ಸಂಸ್ಥೆಯ ಎಲ್ಲಾ ಉಪನ್ಯಾಸಕ ವೃಂದದವರು ಶುಭ ಹಾರೈಸಿದರು.