ಜಿಲ್ಲಾ ವಾಲ್ಮೀಕಿ ಸಮಾಜದ ವಿವಿಧ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಆ.೧೩ರಂದು ಬೃಹತ್ ಪ್ರತಿಭಟನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೪:ವಾಲ್ಮೀಕಿ ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ಸಮಾಜದ ವಿವಿಧ ಪ್ರಗತಿಪರ ಸಂಘಟನೆÀ ಒಕ್ಕೂಟದ ವೇದಿಕೆ ಆ.೧೩ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಶನಿವಾರ ಮುಂಜಾನೆ ೧೦ ಗಂಟೆಗೆ ನಗರದ ಗಗನ ಮಹಲ್ ಉದ್ಯಾನದಲ್ಲಿ ನಡೆದ ಜಿಲ್ಲಾ ವಾಲ್ಮೀಕಿ ಸಮಾಜದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವೇದಿಕೆಯ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ವಾಲ್ಮೀಕಿ ಸಮಾಜದ ೩೯ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವ ಸರಕಾರ ಧೋರಣೆ ಖಂಡಿಸಿ ಹಾಗೂ ವಾಲ್ಕೀಕಿ ನಿಗದ ೧೮೭ ಕೋಟಿ ರೂ. ಹಗರಣ ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಆ,೧೩ರಂದು ಬೆಳಗ್ಗೆ ೧೦ ಗಂಟೆಗೆ ವಿಜಯಪುರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ, ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಿಲ್ಲಾ ವಾಲ್ಮೀಕಿ ವಿವಿಧ ಪ್ರಗತಿಪರ ಸಂಘಟನೆಯ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ಕಾರಣ ಜಿಲ್ಲೆಯ ವಾಲ್ಮೀಕಿ ಸಮಾಜದ ಎಲ್ಲಾ ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಧರ್ಮದರ್ಶಿ ಮಲ್ಲಪ್ಪ ಕವಲಗಿ, ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಬಟಗಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಬಿ.ಎಸ್. ಗಸ್ತಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ನಾಯ್ಕೋಡಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷÀ ರವಿ ಬಿಸನಾಳ, ರಮೇಶ ನಾಯ್ಕೋಡಿ, ಭೀಮರಾಯ ನಾಯ್ಕೋಡಿ, ಶಿವಾನಂದ ನಾಗರಾಳ, ಸಂಜೀವ ಬಂದಿನಾಳ, ಸದಾಶಿವ ಕಡ್ಲೇವಾಡ, ಮಾಂತೇಶ ದೇವೂರ, ಅಶ್ವಥ ರಬಿನಾಳ ಹಾಗೂ ಸಮಾಜದ ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.