ವಿರೋಧದ ನಡುವೆ ಮಹಿಷ ಮಂಡಲೋತ್ಸವ ಆಚರಣೆ
ಸಂಜೆವಾಣಿ ನ್ಯೂಸ್
ಮೈಸೂರು,:ಸೆ.30:– ಸಣ್ಣ ವಿರೋಧದ ನಡುವೆಯೂ ದ್ರಾವಿಡ ದೊರೆ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಜರುಗಿತು.
ಮೂಲ ನಿವಾಸಿಗಳ ರಾಜ ಎಂದೇ ಕರೆಯಲ್ಪಡುವ ಮಹಿಷ ದಸರಾ ಆಚರಣೆಯನ್ನು ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಮಹಿಷನ ಕಂಚಿನ ಸಣ್ಣ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಖ್ಯಾತ ಚಿಂತಕ ಯೋಗೇಶ್ ಮಾಸ್ಟರ್ ಉದ್ಘಾಟನೆ ಮಾಡಿದರು. ಇದೇ ವೇಳೆ ಬುದ್ದ, ಅಂಬೇಡ್ಕರ್ ಮೂರ್ತಿಗಳಿಗೂ ಪುಷ್ಪಾರ್ಚನೆ ಮಾಡಲಾಯಿತು.
ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತಾದರೂ ನಗರ ಪೆÇಲೀಸರು ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಪುರಭವನದ ಆವರಣದಲ್ಲೇ ವೇದಿಕೆ ಕಾರ್ಯಕ್ರಮದಲ್ಲಿ ಮಹಿಷ ದಸರಾ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉರಿಲಿಳಗಿ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಬೋದಿ ದತ್ತ ಬಂತೇಜಿ, ಚಿಂತಕ ಶಿವಸುಂದರ್, ಪೆÇ್ರಕೆ.ಎಸ್.ಭಗವಾನ್, ಲೇಖಕ ಸಿದ್ಧಸ್ವಾಮಿ, ಪೆÇ್ರ.ಪಿ.ವಿ.ನಂಜರಾಜೇ ಅರಸ್, ಸೇರಿ ಅನೇಕರು ಉಪಸ್ಥಿತರಿದ್ದರು.
ಹಿಂದೂ ಎಂದರೆ ಹೀನಾ:ಪ್ರಗತಿಪರ ಚಿಂತಕ ಪೆÇ್ರ.ಕೆ.ಎಸ್.ಭಗವಾನ್ ಮಾತನಾಡಿ, ಹಿಂದೂ ಎಂದರೆ ಹೀನಾ ಎಂದು ಅರ್ಥ. ಯಾರು ಹಿಂದೂ ಆಗಬಾರದು ಎಂದು ಹೇಳಿದರು ನೀಡಿದ್ದಾರೆ. ಜ್ಞಾನದ ಹಸಿವು ಇಲ್ಲದ ಕಾರಣ ಅನೇಕರು ಗುಲಾಮರಾಗಿದ್ದಾರೆ ಎಂದಿದ್ದಾರೆ.
ಹಿಂದೂ ಧರ್ಮ ಅಂದರೆ, ಅದು ಹಿಂದೂಗಳ ಧರ್ಮ ಅಲ್ಲ. ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ, ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನಲ್ಲಾ, ಅವರನ್ನು ಶೂದ್ರರು ಅಂತಾರೆ. ದೇವಸ್ಥಾನ ಕಟ್ಟುವುದು ಶೂದ್ರರು, ದೇವಸ್ಥಾನದ ಒಳಗೆ ಇರುವವರು ಬ್ರಾಹ್ಮಣರು.ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ.ನಾವು ಶೂದ್ರರಲ್ಲಾ ಎಂದು ಹೇಳಬೇಕು. ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು ಎಂದರು.
ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ?, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡುತ್ತಾರೆ ಅಷ್ಟೇ. ದೇವಸ್ಥಾನಕ್ಕೆ ಹೋದರೆ ಕಳೆದುಕೊಳ್ಳುತ್ತೇವೆ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗ ಬಾರದು ಎಂದರು.
ಮನುಸ್ಮೃತಿಯಲ್ಲಿ ಶೂದ್ರರು ಅಂದರೆ ಸೂಳೆಗೆ ಹುಟ್ಟಿದವನು ಅಂತಾ ಇದೆ. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ? ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದು ನಂಬಿ ಅಂತಾ ಬುದ್ಧ ಹೇಳಲ್ಲ ಎಂದು ತಿಳಿಸಿದರು.
ನಾನು ಹೇಳಿದ್ದು ಕೇಳಬೇಕು ಇಲ್ಲದಿದ್ದರೆ ಸ್ವರ್ಗ ಸಿಗಲ್ಲ ಅಂತ ಏಸು ಹೇಳುತ್ತಾರೆ. ನನ್ನ ಮಾತು ಕೇಳದಿದ್ದರೆ ಮೋಕ್ಷ ಸಿಗಲ್ಲ ಅಂತ ಪ್ರವಾದಿ ಹೇಳುತ್ತಾನೆ. ನಾನು ಹೇಳಿದ್ದು ಕೇಳದಿದ್ರೆ ನರಕ್ಕೆ ಹೋಗ್ತೀರಾ ಅಂತಾ ಕೃಷ್ಣ ಹೇಳ್ತಾನೆ. ಗುಲಾಮ, ಸೂ ಮಗ ಎಂದು ಹೇಳುವ ಹಿಂದೂ ಧರ್ಮದಲ್ಲಿ ಇರಬಾರದು. ನಾವು ಬುದ್ಧ ಧರ್ಮಕ್ಕೆ ಹೋಗಬೇಕು. ಸೂ ಮಗ ಎನ್ನುವ ಧರ್ಮಕ್ಕೆ ಎಡಗಾಲು ಎಕ್ಕಡ ತಗೊಂಡು ಹೊಡೆಯಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು ಎಂದು ಹೇಳಿದರು.