ವಿಶ್ವ ಸ್ತನ್ಯಪಾನ ಸಪ್ತಾಹ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೪: ಚಿತ್ರದುರ್ಗ ನಗರದ ಐಯುಡಿಪಿ ಲೇಔಟ್ ಸಮೀಪದ ಎಂ.ಜಿ ನಗರ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕರಾದ ಆರ್.ನಿರ್ಮಲ ಅವರು, ವಿಶ್ವ ಸ್ತನ್ಯಪಾನ ಸಪ್ತಾಹ-2024 “ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ತಾಯಂದಿರಿಗೆ ಎದೆಹಾಲಿನ ಮಹತ್ವದ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರಾದ ಮಂಜುಳಾ, ನಳಿನಾಕ್ಷಿ, ಚಂದ್ರಕಲಾ ಮತ್ತು ಆರೋಗ್ಯ ಸಹಾಯಕಿ ಸುಜಾತ, ಆಶಾ ಕಾರ್ಯಕರ್ತೆ ಪ್ರೇಮ ಇದ್ದರು