ಶ್ರೀನಿವಾಸ್ ದಾಸಕರಿಯಪ್ಪಗೆ ಸಮಾಜ ಸೇವಾ ವಿಭೂಷಣ ಪ್ರಶಸ್ತಿ
ಸಂಜೆವಾಣಿ ವಾರ್ತೆ
ದಾವಣಗೆರೆ. ಆ.೪; ನಗರದ ಶ್ರೀ ಅಭಿನವ ರೇಣುಕಾಮಂದಿರದಲ್ಲಿ ನಡೆಯುತ್ತಿರುವ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮಸಮಾರಂಭದಲ್ಲಿ ದಾವಣಗೆರೆ ಬಿಜೆಪಿ ಮುಖಂಡರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರು ಸಮಾಜ ಸೇವಾ ವಿಭೂಷಣ’ ಎಂಬ ಪ್ರಶಸ್ತಿ ನೀಡಿ ಗೌರವಿಸಿದರು.ಈ ವೇಳೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ  ದೇವರಮನೆ ಶಿವಕುಮಾರ್, ಶ್ರೀ ಜಗದ್ಗುರು ರೇಣುಕ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದೇವರಮನೆ ಶಿವರಾಜ್ ಉಪಸ್ಥಿತರಿದ್ದರು.