ವಚನ ದರ್ಶನ ಪುಸ್ತಕ ಬಿಡುಗಡೆಗೆ ವಿರೋಧ: 50ಕ್ಕೂ ಹೆಚ್ಚು ಪ್ರತಿಭಟನೆಕಾರರು ವಶಕ್ಕೆ
ಕಲಬುರಗಿ:ಆ.3:ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವ ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಪ್ರಗತಿಪರ ಸಂಘಟನೆಗಳ ಪ್ರಮುಖರು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಪ್ರತಿಭಟನೆಕಾರರನ್ನು ಪೋಲಿಸರು ವಶಕ್ಕೆ ತೆಗೆದುಕೊಂಡರು.
ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಪ್ರಭುಲಿಂಗ್ ಮಹಾಗಾಂವಕರ್, ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ್, ಸುನಿಲ್ ಮಾನ್ಪಡೆ ಸೇರಿದಂತೆ ಹಲವರನ್ನು ತಡೆದ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ನಗರದಲ್ಲಿ ಸಂಘ ಪರಿವಾರ ಪ್ರೇರಿತ ವಿಶ್ವ ಗುರು ಕರ್ನಾಟಕ ಸಾಂಸ್ಕøತಿಕ ನಾಯಕ ಬಸವಣ್ಣನವರ, ಶರಣ ಚಳುವಳಿಯ ನಿಜ ತಿರುಚಿ ಅವರ ತತ್ವ ,ಚಿಂತನೆ ಚಳುವಳಿ, ಅಯೋಧ್ಯೆ ಪ್ರಕಾಶಿತ ಆರ್‍ಎಸ್‍ಎಸ್ ಪ್ರಕಟಿತ ವಚನ ದರ್ಶನ, ಕೃತಿ ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ಮಾಡಿದರು.
ಬಸವಣ್ಣನವರ ಭಾವಚಿತ್ರ ಋಷಿ ಮುನಿಯಂತೆ ಮಾಡಿದ್ದು, ಕೊರಳಲ್ಲಿ ತುಳಸಿ ಮಾಲೆ ಹಾಕಿರುವುದು, ಬಿಲ್ಲು- ಬಾಣಗಳನ್ನು ತೋರಿಸಿರುವುದು ಬಸವಣ್ಣನವರಿಗೆ ಹಾಗೂ ಬಸವ ತತ್ವಕ್ಕೆ ಮಾಡಿದ ಅಪಚಾರ ಎಂದು ಪ್ರತಿಭಟಿಸಿ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಆರ್.ಜಿ. ಶೆಟಗಾರ್, ಪ್ರೊ ಆರ್.ಕೆ. ಹುಡುಗಿ, ಶಾಂತಪ್ಪ ಪಾಟೀಲ್, ಪ್ರಭು ಖಾನಾಪೂರ್, ಪ್ರೊ. ಮೀನಾಕ್ಷಿ ಬಾಳಿ, ಸುನೀಲ್ ಮಾರುತಿ ಮಾನಪಡೆ, ರವೀಂದ್ರ ಶಬಾದಿ, ಲಕ್ಷ್ಮೀಕಾಂತ್ ಹುಬ್ಬಳ್ಳಿ, ಶರಣಗೌಡ ಪಾಟೀಲ್, ಮಹಾಂತೇಶ್ ಕಲಬುರ್ಗಿ, ಪ್ರಭುಲಿಂಗ ಮಾಹಗಾಂವಕರ್, ಲವಿತ್ರಾ ವಸ್ತ್ರದ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪೆÇಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿ ಬ್ರಹ್ಮಪುರ ಪೆÇಲೀಸ್ ಠಾಣೆಗೆ ಕರೆತಂದರು.