ಗಂವ್ಹಾರದಿಂದ ಪರಂಪರಾ ಪಾದಯಾತ್ರೆ ಆರಂಭ
ಜೇವರ್ಗಿ:ಆ.3: ತಾಲೂಕಿನ ಸಿದ್ದಿ ಪುರುಷ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿಗೆ ಪ್ರತಿ ವರ್ಷದ ಪದ್ಧತಿಯಂತೆ ಅಬ್ಬೆತುಮಕೂರು ಡಾ.ಗಂಗಾಧರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪರಂಪರಾ ಪಾದಯಾತ್ರೆಗೆ ಶುಕ್ರವಾರ ಅದ್ದೂರಿ ಚಾಲನೆ ದೊರೆಕಿತು.
ಶುಕ್ರವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಅಲ್ಲಿ ಬಿ.ಎಂ ಪಾಟೀಲ ಅವರಿಂದ ಪ್ರಸಾದ ವ್ಯವಸ್ಥೆ ಜರುಗಿತು. ನಂತರ ಮ.1 ಗಂಟೆಗೆ ಸಕಲ ಮಂಗಲ ವಾದ್ಯಗಳೊಂದಿಗೆ ಅಮೃತೇಶ್ವರ ಮಂದಿರದಿಂದ ಪೂಜ್ಯರ ದರ್ಶನ, ಪ್ರಸಾದ ಪಡೆದುಕೊಂಡು ವಿಶ್ವಾರಾಧ್ಯರ ಜನ್ಮಭೂಮಿ ಪಂಚಗೃಹ ತೋಪಕಟ್ಟಿ ಹಿರೇಮಠದಿಂದ ಭಕ್ತಗಣಪುರದ ಜನರ ಕಳಸ, ಕನ್ನಡಿಯೊಂದಿಗೆ ಪಾದಯಾತ್ರೆ ಸಾಗಿತು.
ಅಲ್ಲಿಂದ ಮುಂದೆ ಹೊರಡುವ ಪಾದಯಾತ್ರೆ ಗ್ರಾಮದ ಸೀಮಾಂತರದಲ್ಲಿ ಊರಿನ ಚನ್ನಪ್ಪ ಸಾಹು ಬಿರೆದಾರ ಇವರ ಹೊಲದಲ್ಲಿ ನಿರ್ಮಿಸಿದ ಗುರು ಮಂಟಪದಲ್ಲಿ ಶ್ರೀಗಳಿಗೆ ಪಾದಪೂಜೆ ನೆರವೇರಿತು. ಅಲ್ಲಿ ಎಲ್ಲ ಭಕ್ತಗಣ ಪ್ರಸಾದ ಸ್ವೀಕರಿಸಿ ಮುಂದೆ ಹೊರಡುವ ಪಾದಯಾತ್ರೆ ಮಾರ್ಗ ಮಧ್ಯದಲ್ಲಿ ಅನೇಕ ಭಕ್ತರ ವಿಶ್ರಾಂತಿ ಕಟ್ಟೆಯಲ್ಲಿ ಪಾದಪೂಜೆಯನ್ನು ಮುಗಿಸಿಕೊಂಡು ಅಣಬಿ ಗ್ರಾಮವನ್ನು ತಲುಪಿತು. ಅಣಬಿ ಗ್ರಾಮದ ಭಕ್ತರು ಪಾದಯಾತ್ರೆಯನ್ನು ಭಕ್ತಿಯಿಂದ ಬರಮಾಡಿಕೊಂಡು ಶ್ರೀಗಳ ಪಾದಪೂಜೆ ನೆರವೇರಿಸಿದರು.
ಆ.3ರಂದು ನಾಳೆ ಶನಿವಾರ 2ನೇ ದಿನದ ಪಾದಯಾತ್ರೆ ಕನಗಾನಹಳ್ಳಿ ಮಾರ್ಗವಾಗಿ ಹೊರಟು ಊಳವಂಡಗೇರಾ ಗ್ರಾಮದ ಭಕ್ತರಿಂದ ಪಾದಪೂಜೆ ಮತ್ತು ಪ್ರಸಾದ ವ್ಯವಸ್ಥೆ ನೆರವೇರುವುದು. ಅಲ್ಲಿಂದ ಮುಂದೆ ಸಾಗುವ ಪಾದಯಾತ್ರೆ ಬನ್ನೆಟ್ಟಿ ಗ್ರಾಮ ದಾಟಿದ ನಂತರ ಶ್ರೀವಿಶ್ವಾರಾಧ್ಯರ ದರ್ಶನ ಕಟ್ಟೆಯಲ್ಲಿ ಶಿವಲಿಂಗಪ್ಪ ಸಾಹು ಕೂಡಿ ಫರಹತಾಬಾದ್ ಹಾಗೂ ಅವರ ಬಳಗದವರು ಏರ್ಪಡಿಸುವ ಪ್ರಸಾದವನ್ನು ಸ್ವೀಕರಿಸಿ ನಂತರ ಶ್ರೀಗಳು ಎಲ್ಲ ಭಕ್ತರಿಗೆ ದರ್ಶನ ನೀಡುವರು. ತರುವಾಯ ಮಾಸಿಕ ಅಮಾವಾಸ್ಯೆಯ ಶಿವಾನುಭವ ಗೋಷ್ಠಿ ಜರುವುದರೊಂದಿಗೆ ಪಾದಯಾತ್ರೆ ಸಂಪನ್ನಗೊಳ್ಳುವುದು.
ಕರ್ನಾಟಕ, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಸೇರಿದಂತೆ ಲಕ್ಷಾಂತರ ಭಕ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶಾಂತಿ, ಸೌಹಾರ್ದತೆಯಿಂದ ನಡೆಯುವ ಭಕ್ತಿಯ ಈ ಪಾದಯಾತ್ರೆಯಲ್ಲಿ ಸಹಸ್ರಾರು ಜನ ಪಾಲ್ಗೊಂಡಿದ್ದರು.
ಆ.4ರಂದು ರವಿವಾರ ಅಮವಾಸ್ಯೆ ದಿವಸ 3ನೇ ದಿನದ ಪಾದಯಾತ್ರೆ ಅಮಾವಾಸ್ಯೆಯ ವಿಶೇಷ ಪೂಜಾ ವಿಧಾನಗಳನ್ನು ಪಲ್ಲಕ್ಕಿ ಮೂರ್ತಿ ಗಂಗಾಸ್ನಾನ ನೆರವೇರಿಸಿಕೊಂಡು ತರುವಾಯ ಹೋತಪೇಟೆಯ ಮಲ್ಲರೆಡ್ಡಿಗೌಡ, ಶಹಾಪೂರದ ಮರೆಪ್ಪ ಹೈಯ್ಯಾಳಕರ್ ಏರ್ಪಡಿಸುವ ಮಧ್ಯಾಹ್ನದ ಪ್ರಸಾದವನ್ನು ಸ್ವೀಕರಿಸಿ ಪಾದಯಾತ್ರೆಯು ಠಾಣಗುಂದಿ ತಲುಪುವುದು.
ಸಂಜೆ 6 ಗಂಟೆಗೆ ಸಮಸ್ತ ಭಕ್ತರು ನಾಡಿನ ವಿವಿಧ ಮಠಾಧೀಶರು, ಸಚಿವರು, ಶಾಸಕರುಗಳು, ರಾಜಕೀಯ ಮುಖಂಡರು, ಸಾಹಿತಿ, ಕಲಾವಿದರು ಪಾದಯಾತ್ರೆಯನ್ನು ಭಕ್ತಿ ಸಡಗರಗಳಿಂದ ಬರಮಾಡಿಕೊಂಡು ಪಾದಗಟ್ಟೆಯಿಂದ ಶ್ರೀ ವಿಶ್ವಾರಾಧ್ಯರ ದೇವಸ್ಥಾನದ ವರೆಗೆ ವಿಶೇಷ ಮೆರವಣಿಗೆಯಲ್ಲಿ ಕರೆದೊಯ್ಯುವರು.
ಪದಯಾತ್ರೆಯಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಪ್ರಮುಖರಾದ ವಿಜಯಕುಮಾರ ಪಾಟೀಲ ಪೆÇಲೀಸ್ ಪಾಟೀಲ, ಬಸವರಾಜಗೌಡ ಪೆÇಲೀಸ್ ಪಾಟೀಲ, ದೊಡ್ಡಪ್ಪಗೌಡ ಮಾಲಿಪಾಟೀಲ, ಕಲ್ಯಾಣಕುಮಾರ ಸಂಗಾವಿ, ಶಿವು ಮಾಸ್ತರ ನಾಯ್ಕೋಡಿ, ನಿಂಗಣ್ಷ ಪೂಜಾರಿ ದೊಡ್ಮನಿ, ರಾಜು ಸಾಹು ರೆಡ್ಡಿ, ರುದ್ರಮುನಿಸ್ವಾಮಿ ಸ್ಥಾವರಮಠ, ಶರಣಗೌಡ ಹಲಕರ್ಟಿ, ರಾಮಶೆಟ್ಟೆಪ್ಪ ಸಾಹು ಹುಗ್ಗಿ, ರಾಜಶೇಖರ ಹೇರುಂಡಿ ಸೇರಿದಂತೆ ಸಹಸ್ರಾರು ಜನ ಭಾಗವಹಿಸಿದ್ದರು.