ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನಾಚರಣೆ
ಕಲಬುರಗಿ:ಆ.3: ನಗರದ ಶೇಖರೋಜಾದಲ್ಲಿನ ‘ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಶುಕ್ರವಾರ ‘ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನಾಚರಣೆ’ ಜರುಗಿತು.
ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ, ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಶಿವಯೋಗೆಪ್ಪಾ ಎಸ್.ಬಿರಾದಾರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ರೇಶ್ಮಾ ನಕ್ಕುಂದಿ, ಗಂಗಾಜ್ಯೋತಿ ಗಂಜಿ, ನಾಗೇಶ್ವರಿ ಮುಗಳಿವಾರಿ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ಮಂಗಲಾ ಚಂದಾಪುರೆ, ಸಿದ್ರಾಮ, ನಾಗಮ್ಮ ಸೇರಿದಂತೆ ಇನ್ನಿತರರಿದ್ದರು.