ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ವಿತರಣೆ
ನವಲಗುಂದ,ಆ೩ : ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ ೧ ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ತಾಲ್ಲೂಕಿನ ೬೪ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಿಸಲಾಯಿತು.
ಈ ವೇಳೆ ಕ್ಷೇತ್ರಶಿಕ್ಷಣಾಧಿಕಾರಿ ಎಸ್ ಬಿ ಮಲ್ಲಾಡ ಮಾತನಾಡಿದ ಅವರು ಸುಜ್ಞಾನ ನಿಧಿ ಮಾತ್ರವಲ್ಲದೆ ವೃತ್ತಿ ಕೌಶಲ್ಯ ಹಾಗೂ ಮಹಿಳೆಯರ ಸ್ವಉದ್ಯೋಗಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಒತ್ತು ನೀಡಿದ್ದು ಪಾಲಕ, ಪೋಷಕರು ವಿದ್ಯಾರ್ಥಿಗಳ ಶಿಕ್ಷಣದಲ್ಲಿ ತಮ್ಮ ಪಾತ್ರ ಅರಿತುಕೊಂಡು ಅದನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದರು.
ಇದಕ್ಕೂ ಮೊದಲು ಗದಗ ಜಿಲ್ಲಾ ನಿರ್ದೇಶಕ ಯೋಗೀಶ ಎ ರವರು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದು.
ಶಾಲೆ ಪ್ರಧಾನ ಗುರುಗಳಾದ ಆರ್ ಎನ್ ಹಾಲಿಗೇರಿ, ಶಿವಾನಂದ, ಬೆಂಚಿಕೇರಿ, ಮಾಜಿ ಪುರಸಭಾ ಉಪಾಧ್ಯಕ್ಷೆ ಎಂ ಎನ್ . ಜೋಶಿ ಸೇರಿದಂತೆ ಜ್ಞಾನವಿಕಾಸ ಕೇಂದ್ರ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ಜೆವಿಕೆ ಸಮನ್ವಯಾಧಿಕಾರಿ ಆಶಾ ನಿರೂಪಿಸಿ, ಯೋಜನಾಧಿಕಾರಿ ದಿನೇಶ್ ಶೇರಿಗಾರ ಸ್ವಾಗತಿಸಿದರು ವಲಯ ಮೇಲ್ವಿಚಾರಕಿ ಶ್ರೀಮತಿ ವಾಣಿಶ್ರೀ ವಂದಿಸಿದರು.