ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.೫೦ ಲಕ್ಷ ಮಂಜೂರು
ಸAಜೆವಾಣಿ ವಾರ್ತೆ,
ವಿಜಯಪುರ,ಆ.೩:ಪ್ರಸಕ್ತ ಸಾಲಿಗೆ ನಗರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.೫೦ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.೨ರ ಗೋಂದಳಿ ಗಲ್ಲಿಯ ಜೈ ಅಂಬಾಭವಾನಿ ಮಂದಿರ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ರೂ.೪ ಲಕ್ಷ, ಆಶ್ರಯ ಕಾಲೊನಿಯ ಶಂಕರಲಿAಗ ಗುಡಿ ರಸ್ತೆಯ ವಾರಿ ಮಾರುತಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ಅಡವಿ ಶಂಕರಲಿAಗ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ್ ನಂ.೨೧ ರ ವಿವೇಕ ನಗರ (ಪಶ್ಚಿಮ)ದ ಜಾಗೃತ ಹನುಮಾನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ್ ನಂ.೨೬ರ ದೇಸಾಯಿ ಕಾಲೊನಿ (ಸರ್ ದೇಶಪಾಂಡೆ ಕಾಲೊನಿ)ಯ ಮಹಾಲಕ್ಷಿö್ಮÃ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ್ ನಂ.೩೫ ರ ಲಿಂಗರಾಜ ಕಾಲೋನಿಯ ಬಸವಣ್ಣಪ್ಪ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೮ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.