ಅ.೧ರ ಹೋರಾಟ ಯಶಸ್ವಿಗೊಳಿಸಿ:ನಾಡಗೌಡ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೩೦::ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ರಾಜ್ಯ ಸಮಿತಿಯ ಕರೆಯ ಮೇರೆಗೆ ಗ್ರಾಮ ಪಂಚಾಯತಿ ನೌಕರರ ೧೯ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಖಾತೆ ಸಚಿವರ ನಿವಾಸದ ಎದುರಿಗೆ ಅ.೧ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಗ್ರಾಮ ಪಂಚಾಯತಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿ¸ಬೇಕು ಎಂದು ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ. ನಾಡಗೌಡ ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ವತಿಯಿಂದ ಅ.೧ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಸಚಿವರ ಮನೆ ಚಲೋ ಪ್ರತಿಭಟನೆಯ ಹೋರಾಟದ ಅಂಗವಾಗಿ ವಿಜಯಪುರ ಎಪಿಎಂಸಿ ರೈತ ಸಂಘ ಭವನದಲ್ಲಿ ರಾಜ್ಯ ಸಮಿತಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ, ಸ್ವಾಹಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನ ನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ರೂ. ೩೧,೦೦೦ ನಿಗಧಿಗೊಳಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ ೫೦೦೦೦ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು, ಗ್ರಾಮ ಪಂಚಾಯತಿಗಳಿಗೆ ಎರಡನೇ ನಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅವಕಾಶ ನೀಡಿದ್ದು ಸ್ವಾಗತ. ಆದರೆ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕ ಮಾಡಿಕೊಂಡು ಮುಂದುವರಿಸಬೇಕು. ಅಲ್ಲದೆ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಟರ್ ಮನ್, ಜವಾನÀ, ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅಯ್ಯಪ್ಪ ಬಾಗೇವಾಡಿ. ಜಿಲ್ಲಾ ಉಪಾಧ್ಯಕ್ಷÀ ಮಲ್ಲಪ್ಪ ಚಳಗಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಾಲಿ, ಖಜಾಂಚಿ ಲಾಲಅಹ್ಮದ್ ಶೇಖ, ಶಿವಾನಂದ ಬಿರಾದಾರ, ಅಬ್ದುಲ್‌ರಜಾಕ ತಮದಡ್ಡಿ, ಮಲ್ಲಿಕಾರ್ಜುನ ಮಾದರ, ನಾರಾಯಣ ಬಡಿಗೇರ, ಸಂಗಪ್ಪ ಗಂಗಶೆಟ್ಟಿ, ಹೂವಣ್ಣ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.