ಪತ್ರಿಕೆ ಓದುವುದರಿಂದ ಜ್ಞಾನಮಟ್ಟ ವೃದ್ಧಿ: ಸಿಪಿಐ ರಘುವೀರ್ ಸಿಂಗ್ ಠಾಕೂರ್
ಔರಾದ : ಆ.2:ಪಠ್ಯ ಪುಸ್ತಕಗಳಿಗೆ ಸೀಮಿತವಾದರೆ ಯಶಸ್ಸು ಕಾಣುವುದು ಕಷ್ಟ. ಸಾಧನೆಯ ಕನಸು ಕಾಣುವ ವಿದ್ಯಾರ್ಥಿಗಳು ಪಠ್ಯದ ಹೊರತಾದ ಜ್ಞಾನವನ್ನು ಸಂಪಾದಿಸಬೇಕು. ಪತ್ರಿಕೆ ಓದುವುದರಿಂದ ಜ್ಞಾನಮಟ್ಟ ವೃದ್ಧಿಸುತ್ತದೆ. ಸಾಮಾನ್ಯ ಜ್ಞಾನ ಬೆಳೆಯುತ್ತದೆ ಎಂದು ಸಿಪಿಐ ರಘುವೀರ್ ಸಿಂಗ್ ಠಾಕೂರ್ ಹೇಳಿದರು.
ತಾಲ್ಲೂಕಿನ ಸಂತಪೂರನ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು
ಅಂತರ್ಜಾಲದಲ್ಲಿ ಸಾಕಷ್ಟು ಮಾಹಿತಿ ಸಿಗುತ್ತಿದೆ. ಆದರೆ, ಅದನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಪತ್ರಿಕೆಯಲ್ಲಿ ಪ್ರಕಟವಾಗುವ ಸುದ್ದಿಗೆ ವಿಶ್ವಾಸಾರ್ಹತೆ ಇರುತ್ತದೆ. ಅಂತರ್ಜಾಲದ ಮಾಹಿತಿಗೆ ಈ ವಿಶ್ವಾಸಾರ್ಹತೆ ಇರುವುದಿಲ್ಲ. ಹೀಗಾಗಿ, ಪತ್ರಿಕೆ ಓದುವುದನ್ನು ರೂಢಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಹಿರಿಯ ಪತ್ರಕರ್ತ ಮನ್ಮಥಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂಗೈಯಲ್ಲಿ ಎಲ್ಲವೂ ಸಿಗುತ್ತಿದೆ ಆದರೆ ಇದರ ಉಪಯೋಗ ಒಳ್ಳೆಯ ರೀತಿಯಲ್ಲಿ ಮಾಡಿಕೊಳ್ಳಬೇಕು. ಬರಿ ಹೆಚ್ಚಿನ ಅಂಕಗಳನ್ನು ಗಳಿಸುವುದು ಸಾಧನೆ ಅಲ್ಲ ಎಲ್ಲ ರಂಗದಲ್ಲಿ ಪರಿಣಿತರಾಗಬೇಕು ಅಂದಾಗ ಮಾತ್ರ ಪರಿಪೂರ್ಣರಾಗಲು ಸಾಧ್ಯ ಎಂದು ಹೇಳಿದರು.
ಸ್ಥಾನಿಯ ಸಮಿತಿ ಅಧ್ಯಕ್ಷ ಡಾ. ಸಂಜೀವಕುಮಾರ ಜುಮ್ಮಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಶರಣಪ್ಪ ಚಿಟ್ಮೆ, ಅಮರೇಶ ಚಿದ್ರೆ, ಮಲ್ಲಪ್ಪ ಗೌಡ, ಬಾಲಾಜಿ ಕುಂಬಾರ ಚಟ್ನಾಳ, ಪರಮೇಶ ವಿಳಾಸಪೂರೆ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ್, ಕಾಲೇಜಿನ ಪ್ರಾಂಶುಪಾಲ ನವೀಲಕುಮಾರ ಉತ್ಕಾರ್, ಶಿವಪುತ್ರ ಧರಣಿ, ಅಹ್ಮದ್ ಜಂಬಗಿ, ಸುಧಿರ ಪಾಂಡ್ರೆ, ಲಕ್ಷ್ಮಣ ರಾಠೋಡ, ಸುರ್ಯಕಾಂತ ಎಕಲಾರ, ಅಲೀಂಪಾಶಾ, ಅಂಬಾದಾಸ ಉಪ್ಪಾರ ಸೇರಿದಂತೆ ಇನ್ನಿತರರಿದ್ದರು.