ಹುಬ್ಬಳ್ಳಿಯಲ್ಲಿ ಮತ್ತೆ ಘರ್ಜಿಸಿದ ಪೊಲೀಸ್ ಗನ್ದರೋಡೆಕೋರನ ಕಾಲಿಗೆ ಗುಂಡು- ಬಂಧನ
ಹುಬ್ಬಳ್ಳಿ,ಆ.೨: ಅಪರಾಧ ಕೃತ್ಯಗಳು ಎಗ್ಗಿಲ್ಲದೇ ನಡೆಯುತ್ತಿದ್ದ ಹುಬ್ಬಳ್ಳಿ-ಧಾರವಡ ಮಹಾನಗರದಲ್ಲೀಗ ಪೊಲೀಸ್ ಇಲಾಖೆ ಅದನ್ನು ಮಟ್ಟಹಾಕಲು ಮೈಕೊಡವಿ ನಿಂತAತಿದೆ.
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ಕುಖ್ಯಾತ ದರೋಡೆ ಕೋರನೋರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ.
ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಚೈನು, ಉಂಗುರ, ಫೋನ್, ಹಣವನ್ನು ದರೋಡೆ ಮಾಡಿದ ಪ್ರಕರಣ ನಡೆದಿತ್ತು.
ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಅರುಣ್ ಎಂಬಾತನನ್ನು ಬಂಧಿಸಿದ್ದರು.
ಪ್ರಕರಣದಲ್ಲಿ ಮತ್ತೆ ಕೆಲವರು ಭಾಗಿಯಾಗಿರುವ ಮಾಹಿತಿಯನ್ನು ನೀಡಿದ ಆತ ಎಂ.ಟಿ.ಎಸ್. ಕಾಲನಿಗೆ ಕರೆದೊಯ್ದನೆನ್ನಲಾಗಿದೆ.
ಈ ವೇಳೆ ಪೊಲೀಸರ ಗಮನವನ್ನು ಬೇರೆಡೆ ಸೆಳೆದು, ಅವರ ಮೇಲೆ ಹಲ್ಲೆ ನಡೆಸಿದ ಆರೋಪಿ ಪರಾರಿಯಾಗಲು ಮುಂದಾದನೆನ್ನಲಾಗಿದೆ.
ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ನಗರದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪ್ರಕರಣದ ಹೆಚ್ಚಿನ ಮಾಹಿತಿ ಸಂಗ್ರಹಣೆ ನಡೆದಿದೆ.
ಕೆಲದಿನಗಳ ಹಿಂದಷ್ಟೇ ನಗರದ ಕೇಶ್ವಾಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಪರಾರಿಯಾಗಲು ಯತ್ನಿಸಿದ ಆರೋಪಿಯೋರ್ವನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂದಿಸಿದ್ದರು.
ಅವಳಿ ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಅಪರಾಧ ಕೃತ್ಯಗಳ ತಡೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದು ನಾಗರಿಕರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.