ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ವ್ಯಸನಮುಕ್ತ ಸಮಾಜ ಅನಿವಾರ್ಯ
ಗದಗ,ಆ೨: ಬಲಿಷ್ಟ ರಾಷ್ಟç ನಿರ್ಮಾಣಕ್ಕೆ ವ್ಯಸನ ಮುಕ್ತ ಸಮಾಜ ಅನಿವಾರ್ಯ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಡಾ.ಮಹಾಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತೆವೆ, ವಿಶಿಷ್ಟ ಮತ್ತು ಶ್ರೇಷ್ಠ ವ್ಯಕ್ತಿಯಾದ ಶ್ರೀಗಳು ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು ೪೫ ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದು ಅವರು ತಿಳಿಸಿದರು.
ಜಗತ್ತಿನಲ್ಲಿ ವಿಶೆಷವಾಗಿ ಯುವಜನಾಂಗ ಹಲವಾರು ಮಾದಕ ವಸ್ತುಗಳಿಗೆ ಬಲಿಯಾಗಿದ್ದು, ಭಾರತದಲ್ಲಿ ಸುಮಾರು ೧೦ ಕೋಟಿ ಜನರು ಮಾದಕ ವ್ಯಸನಕ್ಕೆ ದಾಸರಾಗಿದ್ದು ಅದರಲ್ಲಿ ಕಾಲೇಜು ವಿದ್ಯಾರ್ಥಿಗಳ ಸೇರಿದಂತೆ ಯುವಜನರ ಸಂಖ್ಯೆ ಹಚ್ಚಾಗಿರುವುದು ಆಂತಕಕಾರಿ ಮಾದಕ ವಸ್ತುಗಳ ಸೇವನೆಯಿಂದ ಮಾರಣಾಂತಿಕ ರೋಗಗಳಾದ ಕ್ಯಾನ್ಸರ್, ಲಿವರ್, ಹೃದಯ, ಕಿಡ್ನಿ ಸೇರಿದಂತೆ ವಿವಿಧ ಅಂಗಾAಗಗಳು ವಿಫಲವಾಗುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಎಲ್ಲರಿಗೂ ವ್ಯಸನ ಮುಕ್ತ ಸಮಾಜ ನಿರ್ಮಿ ಸಲು ಪ್ರತಿಜ್ಞಾ ವಿಧಿ ಭೋದಿಸಿದರು.
ಸಂಪನ್ಮೂನ ವ್ಯಕ್ತಿ ಮತ್ತು ಗದಗ ವೈದ್ಯಕೀಯ ವಿಜ್ಣಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಅರವಿಂದ ಕರಿನಾಗಣ್ಣನವರ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ತಿಳಿಸಿದರು, ಚಿಕಿತ್ಸೆಗಿಂತ ತಡೆಗಟ್ಟವಿಕೆ ಉತ್ತಮವಾಗಿದ್ದು,ಒಂದು ಸಿಗರೇಟ್ ಸೇರುವುದರಿಂದ ಜೀವನದ ಅತ್ಯಮೂಲ್ಯ ೧೧ ನಿಮಿಷಗಳನ್ನು ಕಳೆದುಕೊಳ್ಳುತ್ತೆ ,ಹಾಗು ಸಿಗರೇಟ್ ನಲ್ಲಿ ೬೦೦೦ಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕಗಳಿರುತ್ತವೆ ಮತ್ತು ಅದರಲ್ಲಿ ೬೦ ಕ್ಕೂ ಹೆಚ್ಚೂ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ದಾರಿ ಮಾಡಿ ಕೊಡುತ್ತವೆ, ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರದಂತೆ ಅದಕ್ಕೆ ದಾಸರಾಗುತ್ತಾರೆ, ಹಾಗಾಗಿ ಒಳ್ಳೆಯ ಅಭ್ಯಾಸಗಳನ್ನು ರೂಡಿ ಮಾಡಿಕೊಂಡು ಜೀವನದಲ್ಲಿ ಸಫಲವಾಗಬೇಕೆಂದು ಹಾಗೂ ಪಿಪಿಟಿ ಮೂಲಕ ಮಾದಕ ವ್ಯಸನದ ಕಾರಣಗಳು, ಅದರಿಂದಾಗುವ ಪರಿಣಾಮ ಸೇರಿದಂತೆ ವ್ಯಸನದಿಂದ ಹೇಗೆ ಮುಕ್ತರಾಗಬೇಕೆಂದು ವಿದ್ಯಾರ್ಥಿಗಳಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ವಾರ್ತಾಧಿಕಾರಿ ವಸಂತ ಮಡ್ಲೂರ, ಶಿರಸ್ತೇದಾರ ಎಸ್ ಎಂ ಹಿರೇಮಠ, ವಿದ್ಯಾರ್ಥಿಗಳು ಹಾಜರಿದ್ದರು. ಶ್ರೀಮತಿ ಎಸ್. ಎಸ್. ಗೌಡರ ಕಾರ್ಯಕ್ರಮ ನಿರ್ವಹಿಸಿದರು.