ವ್ಯಸನಕ್ಕೊಳಗಾದವರಿಗೆ ಆತ್ಮಗೌರವದ ಸಂದೇಶ ಸಾರಿದ ಡಾ.ಮಹಾಂತ ಸ್ವಾಮಿಗಳು: ಸಂಗಮೇಶ
ಸAಜೆವಾಣಿ ವಾರ್ತೆ,
ವಿಜಯಪುರ, ಆ.೨: ಜನರು ವ್ಯಸನದ ದಾಸರಾಗದೇ ಆತ್ಮಗೌರವದ ಮೂಲಕ ಸಮಾಜದಲ್ಲಿ ಉನ್ನತಮಟ್ಟದ ಜೀವನ ನಡೆಸಬೇಕೆಂಬ ಇಚ್ಛೆಯಿಂದ ದುಶ್ಚಟಗಳಿಂದ ದೂರ ಮಾಡಲು ಜೋಳಿಗೆ ಹಿಡಿದ ಮಹನೀಯರು ಡಾ. ಮಹಾಂತ ಸ್ವಾಮಿಗಳು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಶ್ರಿ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಡಾ. ಮ.ನಿ.ಪ್ರ. ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ನಡೆದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ವ್ಯಸನಕ್ಕೊಳಗಾದವರ ಅನೇಕ ಕುಟುಂಬಗಳು ಸಂಕಷ್ಟದಲ್ಲಿರುವುದನ್ನು ಮನಗಂಡು ಸಮಾಜದಲ್ಲಿನ ದುಶ್ಚಟಗಳ ತೊಲಗಿಸಲು ಶ್ರಮವಹಿಸಿ ಅನೇಕ ಯುವಜನರ, ಕುಟುಂಬಗಳ ಸುಧಾರಣೆ ತರುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಎಲ್ಲ ವರ್ಗದವರ ಮನೆಮನೆಗೂ ತೆರಳಿ, ಮದ್ಯವ್ಯಸನ, ತಂಬಾಕು ಸೇವನೆ, ಧೂಮಪಾನ, ಆಲಸ್ಯತನ, ಸುಳ್ಳು ಹೇಳುವುದು, ಅಪ್ರಾಮಾಣಿಕತೆಯಂತಹ ಕೆಟ್ಟ ವ್ಯಸನಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸಿದ್ದಾರೆ ಎಂದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಮನಸ್ಸು, ದೇಹ, ಕುಟುಂಬ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಸನಕ್ಕೆ ಅಂಟಿಕೊಳ್ಳುವುದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ವ್ಯಸನಗಳ ಬಗ್ಗೆ ಯುವಜನರು ಎಚ್ಚರದಿಂದಿರಬೇಕು. ದುಷ್ಚಟಗಳಿಗೆ ಬಲಿಯಾಗದೇ ತಮ್ನನ್ನು ನಂಬಿದ ತಂದೆ ತಾಯಿ ಕುಂಟುಬದ ಶ್ರೇಯಸ್ಸಿಗಾಗಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಸದೃಢ ದೇಹವಿದ್ದರೆ ಸದೃಡ ಮನಸ್ಸಿರುತ್ತದೆ, ಮನಸ್ಸನ್ನು ದುರ್ಬಲಗೊಳಿಸಿ ಕೆಟ್ಟ ಚಟಗಳಿಗೆ ಬಲಿಯಾಗಬಾರದು. ಚಂಚಲ ಮನಸ್ಸನ್ನು ನಿಯಂತ್ರಣದಲ್ಲಿಡಲು ಪ್ರತಿದಿನ ಯೋಗ, ವ್ಯಾಯಾಮ ಆಟೋಟಗಳಂತಹ ಹವ್ಯಾಸ ಬೆಳೆಸಿಕೊಳ್ಳಬೇಕು. ಸತತ ಅಧ್ಯಯನಶೀಲರಾಗಿ ಮಹಾನ್ ಸಾಧಕರ ಜೀವನ ಚರಿತ್ರೆ ತಿಳಿದುಕೊಳ್ಳಬೇಕು. ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಉತ್ತಮ ಹವ್ಯಾಸಗಳನ್ನು ಹೊಂದಬೇಕು. ಹುಟ್ಟಿದ ಊರು, ಹೆತ್ತ ತಂದೆ-ತಾಯಿ, ಕಲಿಸಿದ ಗುರು-ಹಿರಿಯರಿಗೆ ಒಳ್ಳೆಯ ಹೆಸರು ಗಳಿಸಿಕೊಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಉಪನ್ಯಾಸ ನೀಡಿದ ಸಾಹಿತಿ ಗಣೇಶ ಅಮೀನಗಡ, ಮೂಢನಂಬಿಕೆ, ಕಂದಾಚಾರ, ದುಶ್ಚಟಗಳನ್ನು ತೊಡೆದುಹಾಕಲು ಅವಿರತವಾಗಿ ಸ್ವಾಸ್ತö?? ಸಮಾಜ ನಿರ್ಮಾಣಕ್ಕಾಗಿ ಹಗಲಿರುಳೆನ್ನದೆ ಶ್ರಮಿಸಿದವರು ಡಾ. ಮಹಾಂತ ಸ್ವಾಮಿಗಳು. ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು ೪೫ ವರ್ಷ ಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಅಗಸ್ಟ್ ೧, ೧೯೩೦ ರಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು ತಮ್ಮ ೧೦ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು. ಪೂಜ್ಯರ ಬಾಲ್ಯದ ಹೆಸರು ಮಹಾಂತಯ್ಯ. ಮುಧೋಳ ಗವಿಮಠದಲ್ಲಿ ಸಂಸ್ಕೃತ ಪಾಠಶಾಲೆಗೆ ಸೇರಿದ ಮಹಾಂತಯ್ಯ ಅವರು ಅಲ್ಲಿ ಮೂರು ವಷಗಳ ಕಾಲ ಅಧ್ಯಯನ ಮಾಡಿ ನಂತರ ೧೯೪೪ ರಲ್ಲಿ ಶಿವಯೋಗ ಮಂದಿರದಲ್ಲಿ ಆರು ವರ್ಷಗಳ ಕಾಲ ಸಂಸ್ಕೃತ-ಕನ್ನಡ ವಿದ್ಯಾಭ್ಯಾಸ ಮಾಡಿದರು. ಮುಂದಿನ ವಿದ್ಯಾಭ್ಯಾಸಕ್ಕಾಗಿ ಬನಾರಸ ಅಂದರೆ ಕಾಶಿಗೆ ತೆರಳಿ ಅಲ್ಲಿ ಜಂಗಮವಾಡಿ ಮಠದಲ್ಲಿದ್ದು, ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು. ನಿರಂತರ ಅನ್ನ ದಾಸೋಹ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ, ನಿಸರ್ಗ ಚಿಕಿತ್ಸೆ-ಯೋಗ ಕೇಂದ್ರ ಸ್ಥಾಪಿಸಿದ ಅವರು, ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಜನಮಾನಸದಲ್ಲಿ ನೆಲೆನಿಂತಿದ್ದಾರೆ ಎಂದು ತಿಳಿಸಿದರು.
ಉಪನ್ಯಾಸ ನೀಡಿದ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ, ದುಷ್ಚಟಗಳಿಂದ ಹಲವು ರೋಗಗಳಿಗೆ ಆಹ್ವಾನ ನೀಡಿದಂತೆ, ದುಷ್ಚಟಕ್ಕೊಳಗಾದ ವ್ಯಕ್ತಿಯ ಮನ ಪರಿವರ್ತಿಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಆರೋಗ್ಯ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳು ನಡೆಯುತಿದ್ದು, ಉತ್ತಮ ಆರೋಗ್ಯ ರೂಡಿಸಿಕೊಳ್ಳಲು ಯಾವುದೇ ಭಯ, ಅಳುಕಿಲ್ಲದೇ ತಜ್ಞ ವೈದ್ಯರನ್ನು ಭೇಟಿಯಾಗಿ ಸಲಹೆ ಸೂಚನೆಗಳನ್ನು ಪಡೆದುಕೊಂಡು ಆರೋಗ್ಯ ಸಂಪತ್ತು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋಧ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಪ್ರಶಾಂತ ಪೂಜಾರ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಶ್ರಲ ಮಂಜುಳಾ ದುರಗನ್ನವರ, ಜಿ.ಬಿ ತಾಟೆ ಸೇರಿದಂತೆ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಕಾರ್ಯಕ್ರಮ ನಿರೂಪಿಸಿದರು. ಸುರೇಶ ವಾಲಿ ಹಾಗೂ ತಂಡ ತಂಡದಿAದ ನಾಡಗೀತೆ ಹಾಗೂ ಸಂಗೀತ ವಾಚನ ಕಾರ್ಯಕ್ರಮ ನಡೆಯಿತು.
ಯಶಸ್ವಿಯಾಗಿ ಜರುಗಿದ ಜನಜಾಗೃತಿ ಜಾಥಾ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ನಡೆದ ವ್ಯಸನಮುಕ್ತ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಚಂದ್ರಶೇಖರ ಹೊಸಮನಿ ಉಪಸ್ಥಿತರಿದ್ದರು.
ಜಾಥಾದುದ್ದಕ್ಕೂ ಘೊಷವಾಕ್ಯಗಳನ್ನು ಸಾರಲಾಯಿತು. ಸಾರ್ವಜನಿಕರಿಗೆ ದುಷ್ಚಟಗಳಿಂದುAಟಾಗುವ ದುಷ್ಪರಿಣಾಮಗಳÀ ಬಗ್ಗೆ ಮಾಹಿತಿ ವಿವರವುಳ್ಳ ಕರಪತ್ರವನ್ನು ವಿತರಿಸಲಾಯಿತು. ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಜಾಥಾವು ನಗರದ ಲಾಲಬಹದ್ದೂರ ಶಾಸ್ತಿç ಮಾರ್ಕೆಟ್ ಮಾರ್ಗವಾಗಿ, ಗಾಂಧೀ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು.
ಉಚಿತ ಆರೋಗ್ಯ ತಪಾಸಣೆ ಶಿಬಿರ
ಡಾ. ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ರಂಗ ಮಂದಿರದ ಆವರಣದಲ್ಲಿ ನಡೆದ ವ್ಯಸನಮುಕ್ತ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಹೃದಯ ಸಂಬAಧಿ ಕಾಯಿಲೆ ಹಾಗೂ ಪಾರ್ಶ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಅಸಾಂಕ್ರಾಮಿಕ ರೋಗಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಆರೋಗ್ಯ ಇಲಾಖೆಯಿಂದ ಏರ್ಪಡಿಸಲಾಗಿತ್ತು. ಈ ವೇಳೆ ಶಿಬಿರದ ಸಂಪೂರ್ಣ ಮಾಹಿತಿ ಪಡೆದುಕೊಂಡ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸ್ವತಃ ರಕ್ತ ತಪಾಸಣೆ ಮಾಡಿಸಿಕೊಂಡರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಇದ್ದರು.