ಸ್ವಾತಂತ್ರö್ಯ ದಿನಾಚರಣೆ ಪೂರ್ವಭಾವಿ ಸಭೆ: ಅರ್ಥಪೂರ್ಣವಾಗಿ ಆಚರಿಸಲು ಡಿಸಿ ಸೂಚನೆ
ಸಂಜೆವಾಣಿ ವಾರ್ತೆ
ವಿಜಯಪುರ,ಆ.೨: ಆಗಸ್ಟ್ ೧೫ ರಂದು ಈ ಬಾರಿಯ ಸ್ವಾತಂತ್ರö್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರö್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಶಿಸ್ತಿನ ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬAಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಬಹು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಭದ್ರತೆ, ಕ್ರೀಡಾಂಗಣದ ಸ್ವಚ್ಛತೆ ಸೇರಿದಂತೆ ಸಿದ್ಧತಾ ಕಾರ್ಯಗಳನ್ನು ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ, ವಹಿಸಿದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಹಾಗೂ ಬಳಸದಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಅಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸುವಂತೆ ಸೂಚಿಸಿ, ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ನಿರ್ವಹಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಎಲ್ಲಾ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಅಂದು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ, ಪ್ರಾದೇಶಿಕ ಅರಣ್ಯ ವಿಭಾಗದ ಉಪಸಂರಕ್ಷಣಾಧಿಕಾರಿ ಶಿವಶರಣಯ್ಯ ಕೆ., ಪ್ರಾದೇಶಿಕ ಸಾರಿಗೆಯ ಅಧಿಕಾರಿ ಆನಂದ ಪಾರ್ಥನಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿಕ್ಷಾಣಧಿಕಾರಿ ಅಶೋಕ ಲಿಮಕರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಸ್ಥೆಗಳ ಪ್ರತಿನಿಧಿಗಳಾದ ಅಡಿವೆಪ್ಪ ಸಾಲಗಲ್, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮಿರೇಕರ, ಗಿರೀಶ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು.