ನೇಳಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೃದಯಸ್ಪರ್ಶಿ ಬಿಳ್ಕೊಡುಗೆ
ಭಾಲ್ಕಿ:ಆ.೨: ಇಪ್ಪತ್ತಾರು ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಹಶಿಕ್ಷಕ ವಿಜಯಕುಮಾರ ಸ್ವಾಮಿ ಅವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್ ತಿಳಿಸಿದರು.
ಭಾಲ್ಕಿ ತಾಲೂಕಿನ ನೇಳಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ವಿಜಯಕುಮಾರ ಸ್ವಾಮಿ ನಿವೃತ್ತಿ ಹೊಂದುತ್ತಿರುವ ಪ್ರಯುಕ್ತ ಶಾಲೆಯಲ್ಲಿ ಹಮ್ಮಿಕೊಂಡ ಹೃದಯಸ್ಪರ್ಶಿ ಬಿಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಇದೇ ವೇಳೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್ ಮಾತನಾಡಿ ಮಕ್ಕಳಲ್ಲಿ ಮಕ್ಕಳಾಗಿ ಬೆರೆತು ಸ್ವಾಮಿಯವರು ಪಾಠ ಮಾಡುತ್ತಿದ್ದರು. ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿ ನೇಳಗಿಯಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿದ ಎಲ್ಲರ ಹೃದಯ ಗೆದ್ದಿದ್ದಾರೆ. ಶಿಕ್ಷಕ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಶ್ಲಾಘನೀಯ ಎಂದರು.
ಇದೇ ವೇಳೆ ವಿಜಯಕುಮಾರ ಸ್ವಾಮಿ ದಂಪತಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ರಾಜಪ್ಪ ಪಾಟೀಲ, ಗ್ರಾ.ಪಂ.ಅಧ್ಯಕ್ಷೆ ಲಕ್ಷಿö್ಮಬಾಯಿ ಸತಗೊಂಡ, ಎಸ್‌ಡಿಎಂಸಿ ಅಧ್ಯಕ್ಷ ಸಂಜೀವಕುಮಾರ ಹಿರಣ್ಯ, ಸಮೂಹ ಸಂಪನ್ಮೂಲ ವ್ಯಕ್ತಿ ಸೋಮನಾಥ ವರಧಾ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀರಂಗರಾವ್, ತಾಲೂಕಾ ಸಿಆರ್‌ಪಿ ಅಧ್ಯಕ್ಷ ಶರಣಪ್ಪ ಕಲ್ಲಪ್ಪನೋರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ನಿರಂಜನ ಪಾತ್ರೆ, ತಾಲೂಕು ಕಾರ್ಯದರ್ಶಿ ಅಶೋಕ ಕುಂಬಾರ್, ನಿ. ಮುಖ್ಯ ಗುರುಗಳಾದ ಬಿ.ರಾಜಕುಮಾರ ಸೇರಿದಂತೆ ಕಣಜಿ ಕ್ಲಸ್ಟರ್ ಮಟ್ಟದ ಎಲ್ಲಾ ಮುಖ್ಯಗುರುಗಳು, ಗ್ರಾಮದ ಮುಖಂಡರು, ಶಾಲೆಯ ಶಿಕ್ಷಕ ವೃಂದ ಹಾಗು ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜಯಕುಮಾರ ಸ್ವಾಮಿಯವರು ತಮ್ಮ ನಿವೃತ್ತಿ ಪ್ರಯುಕ್ತ ಶಾಲಾ ಮಕ್ಕಳಿಗೆ ಬೆಲ್ಟ್, ಟೈ ಮತ್ತು ಗುರುತಿನ ಚೀಟಿ ವಿತರಿಸಿ ಇತರರಿಗೆ ಮಾದರಿಯಾದರು.