ದಾವಣಗೆರೆಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಆಷಾಢ ಇಷ್ಟಲಿಂಗ ಮಹಾಪೂಜೆ
ಸಂಜೆವಾಣಿ ವಾರ್ತೆ
ದಾವಣಗೆರೆ,2; ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದ ಆವರಣದಲ್ಲಿರುವ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭವನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾವೇಶÀ ಜುಲೈ ೩೦ರಿಂದ ಆಗಸ್ಟ್ ೩ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ದಾವಣಗೆರೆ ಜಿಲ್ಲಾ ಘಟಕದ ಆಶ್ರಯದಲ್ಲಿ ಜರುಗಲಿದೆ.ಪ್ರತಿ ದಿನ ಸಂಜೆ ೬.೩೦ಕ್ಕೆ ಜನ ಜಾಗೃತಿ ಧರ್ಮ ಸಮಾವೇಶ ಶ್ರೀ ರಂಭಾಪುರಿ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ಜರುಗಲಿದ್ದು ಜುಲೈ ೩೦ರಂದು ಅ.ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟಿçÃಯ ಅಧ್ಯಕ್ಷ-ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಉದ್ಘಾಟಿಸುವರು. ಕಣ್ವಕುಪ್ಪಿ ಡಾ.ನಾಲ್ವಡಿ ಶಾಂತಲಿAಗ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳುಉಪದೇಶಾಮೃತ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಪ್ರಭಾ ಮಲ್ಲಿಕಾರ್ಜುನ, ಅ.ಭಾ.ವೀ.ಲಿಂ.ಮಹಾಸಭಾ ರಾಷ್ಟಿçÃಯ ಘಟಕದ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್.ಗಣೇಶ್, ವಿ.ಪ.ಸದಸ್ಯ ಅಬ್ದುಲ್ ಜಬ್ಬಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ, ಎಸ್.ಕೆ.ವೀರಣ್ಣ, ದಿನೇಶ ಶೆಟ್ಟಿ ಭಾಗವಹಿಸುವರು. ದಾವಣಗೆರೆ ಪ್ಲಾö್ಯಸ್ಟಿಕ್ ಸರ್ಜನ್ ಡಾ.ಕೆ.ಸಿ.ಶಿವಮೂರ್ತಿ ಅವರಿಗೆ ‘ವೈದ್ಯ ಚಿಂತಾಮಣಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜುಲೈ ೩೧ರಂದು  ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆಯ ಗೌರವಾಧ್ಯಕ್ಷರಾದ  ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಮಳಲಿ ಸಂಸ್ಥಾನಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡುವರು. ಕೈಗಾರಿಕೋದ್ಯಮಿ ಬಿ.ಚಿದಾನಂದಪ್ಪ ಇವರಿಗೆ ‘ಧರ್ಮ ರತ್ನಾಕರ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಮಾಜಿ ವಿ.ಪ.ಸದಸ್ಯ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಎನ್.ಎ.ಮುರುಗೇಶ್ ಭಾಗವಹಿಸುವರು.