ಸ್ವಾತಂತ್ರ್ಯ  ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೨; ಜಿಲ್ಲಾ ಮಟ್ಟದ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿAದ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮವು ಇದೇ ಆಗಸ್ಟ್ 15 ರಂದು ಬೆಳಿಗ್ಗೆ 09 ಕ್ಕೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನೆರವೇರಲಿದ್ದು, ರಾಷ್ಟçಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಿ, ಸ್ವಾತಂತ್ರೋತ್ಸವದ ಸಂದೇಶ ನೀಡುವರು. ಸ್ವಾತಂತ್ರೋತ್ಸವ ಆಚರಣೆಗೆ ಸಂಬAಧಿಸಿದAತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಕಾರ್ಯೋನ್ಮುಖರಾಗಿ ತಮ್ಮ ಹಂತದಲ್ಲಿ ಉಪಸಮಿತಿಗಳ ಸಭೆ ನಡೆಸಿ ಭಾರತ ಸ್ವಾತಂತ್ರೊö್ಯÃತ್ಸವದ ಎಲ್ಲ ಕಾರ್ಯಕ್ರಮಗಳನ್ನು ಯೋಜಿತವಾಗಿ ರೂಪಿಸಿಕೊಂಡು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ಸರ್ಕಾರದ ಶಿಷ್ಟಾಚಾರದ ಮಾರ್ಗಸೂಚಿಗಳನ್ವಯ ಸ್ವಾತಂತ್ರೊö್ಯÃತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಮುದ್ರಿತ ಆಹ್ವಾನ ಪತ್ರಿಕೆಗಳನ್ನು ಎಲ್ಲ ಗಣ್ಯರಿಗೆ ಸಮರ್ಪಕವಾಗಿ ತಲುಪಿಸಬೇಕು. ಶಿಷ್ಟಾಚಾರದಂತೆ ಗಣ್ಯರನ್ನು ವೇದಿಕೆಗೆ ಕರೆತಂದು ಯಾವುದೇ ಗೊಂದಲಗಳಿಗೆ ಅನುವು ಮಾಡಿಕೊಡದಂತೆ ಅವರಿಗೆ ಮೀಸಲಿರಿಸಿದ ಆಸನಗಳಲ್ಲಿ ಕೂರಿಸಲು ಸಂಬAಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು, ವೇದಿಕೆಯಲ್ಲಿ ಶಿಷ್ಠಾಚಾರ ಪಾಲಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರಿಗೆ ಸೂಚನೆ ನೀಡಿದರು.