ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಯವರು : ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ
ಯಾದಗಿರಿ : ಆ. 01 : ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದ ಡಾ.ಮಹಾಂತ ಶಿವಯೋಗಿಯವರು ತೋರಿದ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಿದರೆ ಆರೋಗ್ಯಕ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಭಿಪ್ರಾಯಪಟ್ಟರು.
ಬೆಂಕಿ ದೇಹ ಮಾತ್ರ ಸುಟ್ಟರೆ ವ್ಯಸನ ದೇಹ ಹಾಗೂ ಆತ್ಮವನ್ನು ಸುಡಲಿದೆ ಯಾವುದೇ ಪರೀಕ್ಷೆ ಪಾಸು ಮಾಡಬೇಕಾದರೆ ನಿರ್ದಿಷ್ಟ ಪ್ರಯತ್ನ ಮಾಡಬೇಕು. ಆ ಪ್ರಯತ್ನ ಕೂಡ ಸರಿಯಾಗಿ ಇರಬೇಕು. ಮಹಾಂತ ಶ್ರೀ ವ್ಯಸನ ಮುಕ್ತ ಮಾಡಲು ಜೋಳಿಗೆ ಹಾಕಿದ್ದು ಮಾತ್ರವಲ್ಲ ಹೊರದೇಶದಲ್ಲೂ ವ್ಯಸನ ಮುಕ್ತ ಸಮಾಜಕ್ಕೆ ಕಾರ್ಯಕ್ರಮ ಮಾಡಿ ಸಮಾಜ ಸುಧಾರಣೆಗೆ ಶ್ರಮಿಸಿದ ಏಕೈಕ ಮಹಾಂತರು ಎಂದರು.