ಡೆಂಗ್ಯೂ ಅರಿವು ಮೂಡಿಕೆ
ಸಂಶಿ, ಆ೧: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಕುಂದಗೊಳ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಶಿ ಹಾಗೂ ಕೆ.ಎಲ್.ಇ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಸಂಶಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಆರ್. ಪಾತ್ರೋಟ ಇವರು ಮಾತನಾಡಿ ಡೆಂಗ್ಯೂ ಜ್ವರ ನಿಯಂತ್ರಣ ಬಗ್ಗೆ ಮನೆಯಲ್ಲಿರುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರಲ್, ಬಕೆಟ್, ಕೊಡಗಳಲ್ಲಿ ನೀರನ್ನು ಶೇಖರಿಸಿದ್ದಲ್ಲಿ ಮುಚ್ಚಿಡಿ ಹಾಗೂ ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಿರಿ. ಏಕೆಂದರೆ ಸೊಳ್ಳೆಯ ಮೊಟ್ಟೆಗಳು ನೀರಿಲ್ಲದಿದ್ದರೂ ಒಂದು ವರ್ಷ ಬದುಕಿರುತ್ತವೆ. ನಾವು ಬಳಸಿ ಎಸೆಯುವ ಟೀ ಕಪ್, ಪ್ಲಾಸ್ಟಿಕ್ ಬಾಟಲ್, ಡಬ್ಬಗಳು ನಿರುಪಯುಕ್ತ ವಸ್ತುಗಳಲ್ಲಿ ಮಳೆಗಾಲದಲ್ಲಿ ನೀರು ಸಂಗ್ರಹವಾಗುವುದರಿAದ ಈಡೀಸ್ ಈಜಿಪ್ಟೆ ಸೊಳ್ಳೆಯ ಲಾರ್ವಾ ಬೆಳೆಯುತ್ತವೆ. ನಮ್ಮ ಸಣ್ಣ ನಿರ್ಲಕ್ಷö್ಯವೂ ಕೂಡ ಡೆಂಗ್ಯೂ ಜ್ವರದಿಂದ ನರಳುವಂತೆ ಮಾಡಬಹುದು. ಮನೆಯ ಸುತ್ತಮುತ್ತಲಿನ ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ರಕ್ಷಿಸಿಕೊಳ್ಳಲು ನೀಡುವ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿ ಹಾಗೂ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ ಎಂದು ತಿಳಿಸಿದರು.
ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಎಮ್.ಎನ್ ಅಗಡಿ ಇವರು ಮಾತನಾಡಿ ಇದ್ದಕ್ಕಿದ್ದಂತೆ ತೀವ್ರ ಜ್ವರ, ಮೈಕೈ ನೋವು ಮತ್ತು ಕೀಲುನೋವು, ತೀವ್ರ ತರಹದ ತಲೆನೋವು ಹೆಚ್ಚಾಗಿ ಹಣೆಯ ಮುಂಭಾಗ, ಕಣ್ಣಿನ ಹಿಂಭಾಗದ ನೋವು ಇಂತಹ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣ ಸಮೀಪದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಮಕ್ಕಳಿಗೆ ಜಾಗೃತಿ ಮೂಡಿಸಿದರೆ ಅವರು ತಂದೆ-ತಾಯಿ, ಅಕ್ಕ ಪಕ್ಕದವರಿಗೆ ಇದರ ಬಗ್ಗೆ ತಿಳುವಳಿಕೆ ನೀಡಲಿದ್ದಾರೆ. ಇದರಿಂದ ಅತ್ಯಲ್ಪ ಸಮಯದಲ್ಲಿ ಹೆಚ್ಚಿನ ಜನರಲ್ಲಿ ಜಾಗೃತಿ ಮೂಡಿಸಬಹುದು. ಎಂಬ ಉದ್ದೇಶಕ್ಕೆ ಎಲ್ಲಾ ಕಾಲೇಜುಗಳಲ್ಲಿ ಜಾಗೃತಿ ಮಾಡಿಸುವ ಕೆಲಸ ನಿರಂತರವಾಗಿದೆ ಎಂದು ತಿಳಿಸಿದರು.
ತಾಲೂಕಾ ಆರೋಗ್ಯಧಿಕಾರಿಗಳಾದ ಡಾ. ಸುಫಿಯಾ ದಾಸರಿ ಮಾತನಾಡಿ ಡೆಂಗ್ಯೂ ಜ್ವರ ಹರಡುವ ಬಗೆ, ರೋಗ ಲಕ್ಷಣಗಳು ಹಾಗೂ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಸುರೇಶ ಕಳಸಣ್ಣವರ ವೈದ್ಯಾಧಿಕಾರಿಗಳು ಪ್ರಾ. ಆ. ಕೇಂದ್ರ ಸಂಶಿ, ಪ್ರಾಂಶುಪಾಲರಾದ ಶ್ರೀ ರಮೇಶ ಅತ್ತಿಗೇರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀ ವಿರೇಶ ಅಂಗಡಿ, ಹಿರಿಯ ಮಹಿಳಾ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಶ್ರೀಮತಿ ಎಮ್.ಜಿ.ಭಟ್, ಶ್ರೀದೊಡ್ಡೇಶ. ಡಿ. ವಿದ್ಯಾರ್ಥಿಗಳು ಹಾಜರಿದ್ದರು. ಉಪನ್ಯಾಸಕರಾದ ಶಂಭುಲಿAಗ ಅಂಗಡಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.