ಮೊಳಕಾಲ್ಮುರು: ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.೧: ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಗ್ರಾಮ ಲೆಕ್ಕಾಧಿಕಾರಿ, ಶಿರಸ್ತೆದಾರರು, ಉಪತಹಶೀಲ್ದಾರ್, ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಮೊಳಕಾಲ್ಮೂರು ತಾಲ್ಲೂಕು ಪಹಣಿ-ಆಧಾರ್ ಜೋಡಣೆಯಲ್ಲಿ ಉತ್ತಮ ಸಾಧನೆ ತೋರಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಪಹಣಿ-ಆಧಾರ್ ಜೋಡಣೆ ಮಾಡುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಲ್ಯಾಂಡ್ ಬೀಟ್, ಕಂದಾಯ ಗ್ರಾಮ ರಚನೆ ಸೇರಿದಂತೆ ಕಂದಾಯ ಇಲಾಖೆ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಟ್ಟಣ ಪಂಚಾಯತಿ, ಕೃಷಿ, ಪಶುಸಂಗೋಪನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೂ ಸಭೆ ನಡೆಸಿದರು.ನಂತರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳುತ್ತಿರುವ ತುಮಕೂರ್ಲಹಳ್ಳಿಯಿಂದ ಚಿಕ್ಕೊಬನಹಳ್ಳಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದರು. ಕೋನಸಾಗರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ಶಾಲೆಯ ನಿರ್ಮಾಣ ಕಾಮಗಾರಿ ಪ್ರಗತಿ ವೀಕ್ಷಿಸಿದರು.ಸಭೆಯಲ್ಲಿ ತಹಶೀಲ್ದಾರ್ ಟಿ.ಜಗದೀಶ್, ತಾಲ್ಲೂಕು ಪಂಚಾಯಿತಿ ಇಒ ಪ್ರಕಾಶ್, ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಲಕ್ಷಿö್ಮÃ ನಾರಾಯಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಹರೀಶ್, ಪಶುಇಲಾಖೆ ಸಹಾಯಕ ನಿರ್ದೇಶಕ ಡಾ.ರಂಗಪ್ಪ, ಭೂದಾಖಲೆಗಳ ಸಹಾಯಕ ನಿರ್ದೇಶಕ ನಿರೋಷ ಇದ್ದರು.