“ಬುದ್ಧ ಇದ್ದನಲ್ಲಿ ” ಕೃತಿಗೆ ರಾಜ್ಯ ಪ್ರಶಸ್ತಿ
ತಾಳಿಕೋಟೆ:ಆ.೧: ಪಟ್ಟಣದ ಎಸ್.ಕೆ.ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ.ಸುಜಾತಾ ಚಲವಾದಿ ಬರೆದ “ಬುದ್ಧ ಇದ್ದನಲ್ಲಿ” ಕವನ ಸಂಕಲನಕ್ಕೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೊ. ರು. ಚನ್ನಬಸಪ್ಪ ಇವರು ಹೆಸರಿನಿಂದ ಕೊಡಮಾಡುವ ರಾಜ್ಯ ಮಟ್ಟದ ದತ್ತಿ ಪ್ರಶಸ್ತಿ ದೊರಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಾಳಿಕೋಟೆ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇವಣಸಿದ್ದಪ್ಪ ಕೊಪ್ಪದ ಹಾಗು ಪದಾಧಿಕಾರಿಗಳು, ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ.
ಇದೇ ದಿ.೪ ರವಿವಾರರಂದು ಮುಂಜಾನೆ ೧೧-೦೦ ಗಂಟೆಗೆ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.