ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಕಲಬುರಗಿ,ಸೆ.29-ಸಾಲಬಾಧೆಯಿಂದ ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದಲ್ಲಿ ನಡೆದಿದೆ.
ಗಂಗೂಬಾಯಿ ಚಂದ್ರಕಾಂತ (36) ಮೃತಪಟ್ಟವರು.
ಮೃತ ಮಹಿಳೆಗೆ ಪತಿ, ಮೂವರು ಮಕ್ಕಳಿದ್ದಾರೆ. ಈ ಮೊದಲು ಇವರು ಕಲಬುರಗಿ ನಗರದ ಸೇಡಂ ರಸ್ತೆಯ ಸಿದ್ಧೇಶ್ವರ ಕಾಲೋನಿಯಲ್ಲಿ ವಾಸವಾಗಿದ್ದರು. ನಂತರ ಶಿರಡೋಣಗೆ ಹೋಗಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.