ಪರಿಶಿಷ್ಟರ ಅನುದಾನ ದುರ್ಬಳಕೆ: ನಿವೃತ್ತ ಜಡ್ಜ್ ನೇತೃತ್ವದ ತನಿಖೆಗೆ ಆಗ್ರಹ
ಕಲಬುರಗಿ:ಜು.31-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ ಪ್ರತ್ಯೇಕವಾಗಿ ಮೀಸಲಿಟ್ಟು ಖರ್ಚು ಮಾಡಬೇಕಾದ ಎಸ್‌ಸಿಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಕುರಿತು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕದಲಿತ ಸೇನೆ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ ಒತ್ತಾಯಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪರಿಶಿಷ್ಟರ ಬಡಾವಣೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು, ಪರಿಶಿಷ್ಟರ ಮಕ್ಕಳು ಇಂಜಿನಿಯರಿAಗ್, ವೈದ್ಯಕೀಯ ಮತ್ತು ಪಿಎಚ್‌ಡಿಯಂತಹ ಉನ್ನತ ವ್ಯಾಸಂಗ ಕೈಗೊಳ್ಳುವಾಗ ಎಸ್‌ಸಿಪಿ/ಟಿಎಸ್‌ಪಿ ಅನುದಾನ ಬಳಸಿಕೊಂಡು ಸಹಾಯ ಮಾಡಬೇಕೆಂಬ ನಿಯಮವಿದೆ.ಆದರೆ, 2014-15ರಿಂದ ಇಲ್ಲಿಯವರೆಗಿನ ಯಾವುದೇ ಸರಕಾರ ಈ ಅನುದಾನವನ್ನು ಸರಿಯಾದಉದ್ದೇಶಕ್ಕೆ ಬಳಸದೆ ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದೆ.ಈವರೆಗೆ ರೂ.2,94,963 ಕೋಟಿ ಎಸ್‌ಸಿಪಿ/ಟಿಎಸ್‌ಪಿ ಅನುದಾನ ದುರ್ಬಳಕೆಯಾಗಿದೆ ಎಂದುಕುಡಕಿ ಗಂಭೀರ ಆರೋಪ ಮಾಡಿದರು.
ಪ್ರಸ್ತುತ,ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸಹ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದುರ್ಬಳಕೆ ಮಾಡಿಕೊಂಡಿದೆ.2023-24 ಮತ್ತು 2024-25ನೇ ಸಾಲಿನಲ್ಲಿ ಒಟ್ಟು ರೂ.25,390 ಕೋಟಿ ಪರಿಶಿಷ್ಟರ ಪಾಲಿನ ಅನುದಾನವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಬಳಕೆ ಮಾಡಿಕೊಂಡಿದೆ. ಇದರಿಂದ ಪರಿಶಿಷ್ಟರ ಹಕ್ಕು ಉಲ್ಲಂಘನೆ ಆದಂತಾಗಿz ೆಎಂದು ಕುಡಕಿ ಟೀಕಿಸಿದರು.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಯಾವುದೇ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದರೂ ಪರಿಶಿಷ್ಟರ ಪಾಲಿನ ಅನುದಾನ ಒಂದಲ ್ಲಒಂದು ರೀತಿಯಲ್ಲಿ ದುರ್ಬಳಕೆ ಮಾಡಿಕೊಳ್ಳುವುದು ನಡೆದುಕೊಂಡೇ ಬಂದಿದೆ.ಈ ಹಿಂದೆ ಬಿಜೆಪಿ ಸರಕಾರದಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ರೂ.87 ಕೋಟಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ರೂ.430 ಕೋಟಿ ಹಾಗೂ ಇತ್ತೀಚೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ರೂ.187 ಕೋಟಿ ಅವ್ಯವಹಾರ ನಡೆಸಲಾಗಿದೆ. ಇದರಿಂದಾಗಿ ಪರಿಶಿಷ್ಟರ ಪಾಲಿಗೆ ಲಭಿಸಬೇಕಾದ ಸವಲತ್ತುಗಳು ಅನ್ಯರ ಪಾಲಾಗಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಈ ಎಲ್ಲ ಅಂಶಗಳನ್ನು ಕ್ರೋಢೀಕರಿಸಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ತಂಡ ತನಿಖೆ ಕೈಗೊಂಡಿದ್ದಾದರೆ ಸತ್ಯಾಂಶ ಹೊರಬರಲಿದೆ ಎಂದು ಅವರು ಸಲಹೆ ನೀಡಿದರು.
ಅಖಿಲ ಕರ್ನಾಟಕ ದಲಿತ ಸೇನೆ ಜಿಲ್ಲಾಧ್ಯಕ್ಷ ಚನ್ನವೀರ ಕಾಳಕಿಂಗೆ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಂಜೀವಕುಮಾರ್ ಕಾಂಬಳೆ, ದಲಿತ ಮುಖಂಡ ಶಿವಕುಮಾರ್ ತೋಟ್ನಳ್ಳಿ ಇದ್ದರು.