ಅಂಜುಮನ್ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ, ಪ್ರಶಸ್ತಿ ಪ್ರದಾನ
ವಿಜಯಪುರ,ಜು.31:ನಗರದ ಅಂಜುಮನ್ ಕಾನೂನು ಮಹಾ ವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ನಮ್ಮ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದಂತಹ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದ ಮುಖ್ಯ ಅತಿಥಿ ಎಂ.ಐ. ವರಪೇಟಿ, ಗೌರವ ಅತಿಥಿ ವಿ.ಬಿ. ಮಸೂತಿ ಆಗಮಿಸಿದ್ದರು.
ಪ್ರಾಂಶುಪಾಲ ಡಾ. ಎಸ್.ಎಸ್. ನಾಗಠಾಣ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ದೈಹಿಕ ನಿರ್ದೇಶಕ ಟಿ.ಎಸ್. ಕೂಡಗಿ ಅವರು, ಅಂತರ್ ಕಾಲೇಜು ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಅತ್ಯುತ್ತಮ ಆಟಗಾರರಾಗಿ ಪ್ರಶಸ್ತಿ ಪಡೆದ ಸಮೀರ್ ಖಾಜಿಗೆ ಸನ್ಮಾನಿಸಿದರು. ಇದೇ ವೇಳೆ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.