ಕೆಟ್ಟು ನಿಂತ ಟಿಪ್ಪರ್‌ಗೆ ಬೈಕ್ ಡಿಕ್ಕಿ: ಒಬ್ಬ ಸ್ಥಳದಲ್ಲೇ ಸಾವು
ವಾಡಿ,ಜು.31-ಕೆಟ್ಟು ನಿಂತ ಟಿಪ್ಪರ್‌ಗೆ ಬೈಕ್ ಡಿಕ್ಕಿ ಹೊಡೆದು ಒಬ್ಬ ಸ್ಥಳದಲ್ಲೇ ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಂಕೂರ-ಮರತೂರ ಮಧ್ಯೆ ಮಂಗಳವಾರ ರಾತ್ರಿ ನಡೆದಿದೆ.
ಮೃತನನ್ನು ಅಮ್ಜದ್ ಹಾಜಿ ಕರೀಮ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಯುವಕನ ಹೆಸರು ತಿಳಿದುಬಂದಿಲ್ಲ. ಆತನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.