ಮಾನವ ಕಳ್ಳ ಸಾಗಾಣಿಕೆ ತಡೆಗೆ ಸಮನ್ವಯ ಇಲಾಖೆಗಳ ಸಹಕಾರ ಅಗತ್ಯ
ಯಾದಗಿರಿ : ಜು.31 : ಮಾನವ ಜೀವನ ಸುಗಮವಾಗಿ ಸಾಗಬೇಕೆಂದರೆ, ಆಹಾರ, ಬಟ್ಟೆ, ವಸತಿ ಎಷ್ಟು ಮುಖ್ಯವೋ, ಕಾನೂನು ಸಹ ಅಷ್ಟೇ ಮುಖ್ಯ, ಮಾನವ ಕಳ್ಳ ಸಾಗಾಣಿಕೆ ಇದು ಸಾಮಾಜಿಕ ಪಿಡುಗು ಆಗಿದ್ದು, ಅತಿ ಹೆಚ್ಚು ಮಹಿಳೆಯರು ಮತ್ತು ಮಕ್ಕಳ ಇದಕ್ಕೆ ಒಳಗಾಗುತ್ತಿದ್ದಾರೆ, ಮಾನವ ಕಳ್ಳ ಸಾಗಾಣಿಕೆ ತಡೆಗೆ ಸಮನ್ವಯ ಇಲಾಖೆಗಳ ಸಹಕಾರ ಅಗತ್ಯ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಮರಿಯಪ್ಪ ಅವರು ಹೇಳಿದರು.
ಮಂಗಳವಾರ ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಯಾದಗಿರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಯಾದಗಿರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ತಿçÃ ಶಕ್ತಿ ಭವನದಲ್ಲಿ, “ಬೇಟಿ ಬಚಾವೋ, ಬೇಟಿ ಪಡಾವೋ” ಯೋಜನೆಯಡಿ, ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.