ಅಧ್ಯಕ್ಷರಾಗಿ ಆರ್.ಕೆ.ರಮೇಶ್ ಅವಿರೋಧ ಆಯ್ಕೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜು.೩೧: ತಾಲ್ಲೂಕು ಶಿಕ್ಷಣ ಇಲಾಖೆಯ ನೌಕರರ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆರ್.ಕೆ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಕಳೆದ ಹದಿನೈದು ದಿನಗಳ ಹಿಂದೆ ಶಿಕ್ಷಣ ಇಲಾಖೆಯ ನೌಕರರ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಇಂದು ನಡೆದ ಕಾರ್ಯಕಾರಿ ಮಂಡಳಿಯ ಚುನಾವಣೆಯಲ್ಲಿ ಶಿಕ್ಷಣ ಇಲಾಖೆಯ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅಗಸರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ಆರ್.ಕೆ.ರಮೇಶ್, ಉಪಾದ್ಯಕ್ಷರಾಗಿ ಆನೆಗೊಳ ಶಾಲೆಯ ಶಿಕ್ಷಕ ಕೋದಂಡರಾಮು, ಗೌರವಾದ್ಯಕ್ಷರಾಗಿ ಅಕ್ಕಿಹೆಬ್ಬಾಳು ಶಾಲೆಯ ನಾಗಕುಮಾರ್ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಅಗ್ರಹಾರಬಾಚಹಳ್ಳಿ ಶಾಲೆಯ ಬಡ್ತಿ ಮುಖ್ಯಶಿಕ್ಷಕ ಎ.ಎಚ್.ಯೋಗೇಶ್ ಅವಿರೊಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷರನ್ನು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ಕಾರ್ಯದರ್ಶಿ ಸಿ.ಟಿ.ಲಕ್ಷ್ಮಣಗೌಡ, ರಾಜ್ಯ ಉಪಾದ್ಯಕ್ಷ ಎಲ್.ಎಸ್.ಧರ್ಮಪ್ಪ, ರಾಜ್ಯ ಸಹ ಕಾರ್ಯದರ್ಶಿ ಸಂಧ್ಯಾರಾಣಿ, ತಾಲ್ಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಜಿಲ್ಲಾ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಕೆ.ಹೇಮಣ್ಣ ಮುಂತಾದವರು ಅಭಿನಂದಿಸಿದ್ದಾರೆ.