ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: ೨ಕೋಟಿ ೨೮ಲಕ್ಷ ರೂ. ಸಂಗ್ರಹ
ಸಂಜೆವಾಣಿ ವಾರ್ತೆ
ಹನೂರು ಜು ೩೧ :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು ೩೨ ದಿನಗಳಲ್ಲಿ ಒಟ್ಟು ಮೊತ್ತ ೨ ಕೋಟಿ, ೨೮ ಲಕ್ಷ, ೦೩ ಸಾವಿರ ರೂ ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ಮಠಾಧ್ಯಕ್ಷರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ರವರ ದಿವ್ಯಸಾನಿದ್ಯದಲ್ಲಿ ಹಾಗೂ ಪ್ರಾಧಿಕಾರ ಕಾರ್ಯದರ್ಶಿ ರಘು ಎ.ಈ, ಕ.ಆ.ಸೇ, (ಹಿ.ಶ್ರೇಣಿ) ರವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ೬.೩೦ ಗಂಟೆಯಿಂದ ಹುಂಡಿ ಹಣ ಎಣಿಕೆ ಕಾರ್ಯ ಪ್ರಾರಂಭಿಸಿ ಸಂಜೆಯ ವರೆಗೂ ಹುಂಡಿ ಪರ್ಕಾವಣೆ ಕಾರ್ಯ ನಡೆಯಿತು.
ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ಪ್ರಾರಂಭಿಸಲಾಗಿದ್ದು ಸಂಜೆಯವರೆಗೂ ಎಣಿಕೆ ಕಾರ್ಯ ನಡೆದಿದ್ದು. ದಿನಾಂಕ ೨೮.೦೬.೨೦೨೪ ರಿಂದ ೨೯.೦೭.೨೦೨೪ರ ವರೆಗೆ ೩೨ ದಿನಗಳಲ್ಲಿ ಒಟ್ಟು ಮೊತ್ತ ರೂ.೨,೨೮,೦೩,೮೦೩ ರೂ.ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ ೫೯ ಗ್ರಾಂ, ಬೆಳ್ಳಿ ೧ಕೆಜಿ ೫೦೦ ಗ್ರಾಂ. ಹುಂಡಿಯಲ್ಲಿ ದೊರೆತಿದೆ. ಹಾಗೂ ಚಲಾವಣೆಯಾಗದ ೨೦೦೦ ಮುಖ ಬೆಲೆಯ ೨೧ ನೋಟುಗಳು. ಮತ್ತು ವಿದೇಶಿಯ ೬ ನೋಟುಗಳು ದೊರೆತಿದೆ.
ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್.ಜಿ.ಎಲ್, ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರಾದ ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು. ಮಧುಶ್ರೀ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗು ಬ್ಯಾಂಕ್ ಆಫ್ ಬರೋಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.