ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ
ಕಲಬುರಗಿ:ಜು.30:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲಗಳಾದ ಭೀಮಾ, ಬೆಣ್ಣೆತೋರಾ ಮತ್ತು ಭೋಸಗಾ ನದಿಗಳ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದೆ. ಈ ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾsಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲೂö್ಯಎಸ್‌ಎಂಪಿ, ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.