ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸಾವು
ವಿಜಯಪುರ,ಜು.30:ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವನಪ್ಪಿದ್ದಾನೆ.
ಸಂದೀಪ ಗಿಡ್ಡನಗೋಳ (16) ಮೃತಪಟ್ಟ ವಿದ್ಯಾರ್ಥಿ.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ ಎ ಗ್ರಾಮದಲ್ಲಿ ಬಸ್ ಏರುವಾಗ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಚಿಕಿತ್ಸೆಗಾಗಿ ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಿತ್ತು. ಆದಾಗ್ಯೂ
ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಕೊನೆಯುಸಿರು ಎಳೆದಿದ್ದಾನೆ.
ಈ ವಿದ್ಯಾರ್ಥಿ ಸಿಂದಗಿ ಪಟ್ಟಣದ ಎಚ್ ಜಿ ಹೈಸ್ಕೂಲ್ ನ 10 ನೇ ತರಗತಿಯಲ್ಲಿ ಓದುತ್ತಿದ್ದ.
ಘಟನೆ ಖಂಡಿಸಿ ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು.
ಘಟನೆಗೆ ಬಸ್ ಚಾಲಕ ಹಾಗೂ ನಿರ್ವಾಹಕನ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ
ಚಾಲಕ, ನಿರ್ವಾಹಕನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.