ಚಿತ್ರ ಸಂತೆ ಕಾರ್ಯಕ್ರಮ
ಬ್ಯಾಡಗಿ,ಜು೩೦: ಮಕ್ಕಳ ಚಿತ್ರಗಳನ್ನು ನೋಡುವುದು ಚಂದ, ಅವರಿಗೆ ಬರೆಯಲು ಬರದಿದ್ದರೂ ಏನೋ ಒಂದು ಬರೆಯುತ್ತಾರೆ. ಎಲ್ಲರೂ ಒಂದೇ ರೀತಿ ಬರೆಯುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಆಲೋಚನೆ, ಕ್ರಮಗಳಿಗೆ ಅನುಗುಣವಾಗಿ ಒಂದೊAದು ವಿಭಿನ್ನವಾಗಿ ಅವರ ಕಲ್ಪನೆ ಏನಿರುತ್ತದೆ ಹಾಗೆ ಬರೆಯುತ್ತಾರೆ. ಮಕ್ಕಳಿಗೆ ಇದು ಒಳ್ಳೆಯ ವೇದಿಕೆಯಾಗಿದ್ದು, ಶಾಲೆಯ ಮಕ್ಕಳು ಇಂತಹ ಸ್ಪರ್ಧೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಪಟ್ಟಣದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕಾ ಮುದ್ರಣಕಾರರ ಸಂಘ ಮತ್ತು ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯ “ಚಿತ್ರ ಸಂತೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಫೋನುಗಳತ್ತ ಮುಖ ಮಾಡಿ ಅವರಲ್ಲಿನ ಪ್ರತಿಭೆಗಳನ್ನು ಕುಂಠಿತವಾಗುವAತೆ ಮಾಡುತ್ತಿರುವುದು ಹೆಚ್ಚುತ್ತಿದ್ದು, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರಲು ಪಾಲಕರು ಮುಂದಾಗಬೇಕಲ್ಲದೇ, ವಿವಿದ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವರನ್ನು ಉತ್ತೇಜಿಸಬೇಕು ಎಂದು ಕಿವಿಮಾತನ್ನು ಹೇಳಿದರು.
ಅತಿಥಿಯಾಗಿದ್ದ ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ ಉತ್ತೇಜಿಸುವಲ್ಲಿ ಚಿತ್ರಕಲೆ ಸ್ಪರ್ಧೆ ಪೂರಕವಾಗಲಿದೆ ಎಂದು ಹೇಳಿದರಲ್ಲದೇ, ಪ್ರತಿವರ್ಷ ಮಕ್ಕಳಿಗಾಗಿ ನಡೆಸುವ ವಿಶೇಷ ಚಿತ್ರಕಲಾ ಸ್ಪರ್ಧೆಯ ಕಾರ್ಯಕ್ರಮಗಳಿಗೆ ತಾವು ಸಹ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿದ್ದೇಶ್ವರ ಕಲ್ಯಾಣ ಮಂಟಪವನ್ನು ಉಚಿತವಾಗಿ ನೀಡುವ ಜೊತೆಗೆ ಕಾರ್ಯಕ್ರಮಕ್ಕೆ ತಗಲುವ ಎಲ್ಲ ವೆಚ್ಚವನ್ನು ಭರಿಸುವುದಾಗಿ ವಾಗ್ದಾನ ಮಾಡಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ೩೮೦ ಮಕ್ಕಳು ಪಾಲ್ಗೊಂಡಿದ್ದರು. ಎಲ್ಲ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮತ್ತು ಬಣ್ಣದ ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಕಲಾವಿದ ಹರೀಶ ಮಾಳಪ್ಪನವರ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಮುದ್ರಣಕಾರರ ಸಂಘದ ಅಧ್ಯಕ್ಷ ಗಿರೀಶ ಇಂಡಿಮಠ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟೀ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಚನಬಸಪ್ಪ ಹುಲ್ಲತ್ತಿ, ರೋಟರಿ ಕ್ಲಬ್ ಅಧ್ಯಕ್ಷ ಎಂ.ಎಸ್.ಬೂದಿಹಾಳಮಠ, ಮಂಜುನಾಥ ಉಪ್ಪಾರ, ಮಾಲತೇಶ ಅರಳಿಮಟ್ಟಿ, ಕವಿತಾ ಸೊಪ್ಪಿನಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.