ಮೂಲಭೂತ ಸೌಕರ್ಯ ಪರಿಶೀಲನೆ
ಬ್ಯಾಡಗಿ,ಜು೩೦: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸ್ಥಳೀಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಅಮೋಲ್ ಜೆ ಹಿರೇಕುಡಿ ಅವರು ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಲಭ್ಯಗಳು ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ಮಾಡಿದರು.
ನಂತರ ಔಷಧ ವಿತರಣಾ ಕೊಠಡಿಗೆ ಭೇಟಿ ನೀಡಿ ಔಷಧಿಗಳ ದಿನಾಂಕಗಳನ್ನು ವೀಕ್ಷಿಸಿ ಅದರಲ್ಲಿರುವ ಗುಣಮಟ್ಟ ಹಾಗೂ ಅಂತಿಮ ದಿನಾಂಕವನ್ನು ಪರಿಶೀಲಿಸಿದ ರಲ್ಲದೇ ಅಸ್ಪತ್ರೆಗೆ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ಬರುವ ಸಾರ್ವಜನಿಕರಿಗೆ ಸಹಕರಿಸಿ ಎಂದು ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯ ಪರಿಶೀಲನೆಯ ನಂತರ ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ಹಾಸ್ಟೆಲ್ ಮತ್ತು ಶಾಲೆಗೆ ಭೇಟಿ ನೀಡಿ ಅಲ್ಲಿ ಮಕ್ಕಳ ಸೌಲಭ್ಯಗಳ ಬಗ್ಗೆ ಹಾಗೂ ಸಿಬ್ಬಂದಿಗಳ ಬಗ್ಗೆ ವಿಚಾರಣೆ ಮಾಡಿದರು.
ಈ ಸಂದರ್ಭದಲ್ಲಿ ಕಿರಿಯ ದಿವಾಣಿ ನ್ಯಾಯಾಧೀಶ ಸುರೇಶ್ ವಗ್ಗನವರ,. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಟ್ಟರಾಜ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.