ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಹುಂಡಿ ಹಣ ಎಣಿಕೆ
ಸಂಜೆವಾಣಿ ವಾರ್ತೆ
ಹನೂರು ಜು ೩೦ :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ ೬-೩೦ ಗಂಟೆಯಿಂದ ಹುಂಡಿ ಹಣ ಎಣಿಕೆ ಕಾರ್ಯ ಪ್ರಾರಂಭಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ಮಠಾಧ್ಯಕ್ಷರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ರವರ ದಿವ್ಯಸಾನಿದ್ಯದಲ್ಲಿ ಹಾಗೂ ಪ್ರಾಧಿಕಾರ ಕಾರ್ಯದರ್ಶಿ ರಘು ಎ.ಈ, ಕ.ಆ.ಸೇ, (ಹಿ.ಶ್ರೇಣಿ) ರವರ ನೇತೃತ್ವದಲ್ಲಿ ಹುಂಡಿ ಪರ್ಕಾವಣೆ ಕಾರ್ಯ ಪ್ರಾರಭವಾಯಿತು.
ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರಾದ ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು. ಮಧುಶ್ರೀ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗು ಬ್ಯಾಂಕ್ ಆಫ್ ಬರೋಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದು ಹುಂಡಿ ಹಣ ಎಣಿಕೆ ಕಾರ್ಯ ಪ್ರಕ್ರಿಯೆ ನಡೆಯುತ್ತಿದೆ.
ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಇಂದು ಮಂಗಳವಾರ ಬೆಳಿಗ್ಗೆಯಿಂದ ಹುಂಡಿ ಹಣ ಎಣಿಕೆ ಕಾರ್ಯ ಪ್ರಾರಂಭಿಸಲಾಗಿದ್ದು ಸಂಜೆ ಅಥವಾ ರಾತ್ರಿಯವರೆಗೂ ಎಣಿಕೆ ಕಾರ್ಯ ನಡೆದು ಮುಗಿಯಲಿದೆ ನಂತರ. ಮಲೆ ಮಾದಪ್ಪನ ಸನ್ನಿಧಿಯಲ್ಲಿ ಸಂಗ್ರಹವಾಗಿರುವ ನಗದು ಹಣ ಚಿನ್ನ ಬೆಳ್ಳಿ ವಿವರ ತಿಳಿಯಲಿದೆ.