ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ: ಫಯಾಜ್
ಸಂಜೆವಾಣಿ ವಾರ್ತೆ,
ವಿಜಯಪುರ,ಜು.೩೦: ವಿದ್ಯಾರ್ಥಿಗಳು ತಮ್ಮ ಆಸಕ್ತಿ ಯಾವುದರಲ್ಲಿ ಇದೆ ಎಂಬುವುದುನ್ನು ಅರಿತು ತಮ್ಮಗುರಿ ಮುಟ್ಟಲು ಸತತ ಪ್ರಯತ್ನ ಮಾಡಿದಾಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ಎಂದು ಸಮಾಜ ಸೇವಕ ಫಯಾಜ್ ಕಲಾದಗಿ ಹೇಳಿದರು.
ನಗರದ ನ್ಯೂ ಬ್ರಿಲಿಯಂಟ್ ಶಾಲೆಯಲಿ ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯ, ವಿಜಯಪುರ ಶ್ರೀ ಸಾಯಿ ಶಿಕ್ಷಣ ಸಂಸ್ಥೆÀ, ಶ್ರೀ ಸ್ವಾಮಿ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಎನ್.ಎಸ್.ಎಸ್‌ನಿಂದ ಕಲಿತಕೊಂಡಿದ್ದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎನ್‌ಎಸ್‌ಎಸ್ ದಿಂದ ಪ್ರತಿಯೊಬ್ಬರಲ್ಲಿ ಶಿಸ್ತು ಸಂಯಮ ಬೆಳೆಯುವುದು. ರಾಷ್ಟçಅಭಿವೃದ್ಧಿ ಹೊಂದಬೇಕಾದರೆ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ಸಾಯಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಿ.ಎಂ. ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವುದರ ಜೊತೆಗೆ ಬದುಕು ಯಾವ ರೀತಿ ಇರಬೇಕೆಂದು ತಿಳಿಸಿಕೊಡುತ್ತದೆ ಎಂದರು.
ನಮ್ಮ ಸಂಸ್ಥೆಯಲ್ಲಿ ಸತತವಾಗಿ ೭ ದಿನಗಳ ಕಾಲ ಹಮ್ಮಿಕೊಂಡ ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಅಚ್ಚುಕಟ್ಟಾಗಿ ನೆರವೇರಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ ಎಂದರು.
ಈ ಸಂದರ್ಭದಲ್ಲಿ ಎನ್.ಎಸ್.ಎಸ್. ಜಿಲ್ಲಾ ನೋಡಲ್ ಅಧಿಕಾರಿ ಡಾ. ಪ್ರಕಾಶ ರಾಠೊಡ ಎನ್.ಎಸ್. ಎಸ್ ಕುರಿತು ಸವಿವರವಾಗಿ ವಿವರಿಸಿದರು.
ವೇದಿಕೆ ಮೇಲೆ ವಾಸ್ವಿ ಸೌಹಾರ್ದ ಸಂಘದ ಅಧ್ಯಕ್ಷÀ ಜಿ.ಎಂ. ಮಾದನಶೆಟ್ಟಿ, ಉಪ ಪ್ರಾಚಾರ್ಯ ಸಂತೋಷ ಹಳ್ಳಿ, ಶಾಲೆಯ ಆಡಳಿತಾಧಿಕಾರಿ ಪುನೀತಗೌಡ ಬಿರಾದಾರ ಇದ್ದರು.
ಇದೇ ಸಂದರ್ಭದಲ್ಲಿ ಶಾಲೆಯ ಗುರುಮಾತೆಯರು, ಗುರುಗಳು, ಶಿಬಿರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.