ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ: ಪ.ಪಂ ಸದಸ್ಯ ಶ್ರೀಶೈಲ ಮುಳವಾಡ
ಕೊಲ್ಹಾರ: ಸೆ.29:ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ.ಪಂ ಸದಸ್ಯ ಶ್ರೀಶೈಲ ಮುಳವಾಡ ಹೇಳಿದರು
ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಇಡೀ ಪಟ್ಟಣ ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗಲಿದೆ ಎಂದರು. ಸಾರ್ವಜನಿಕರು ತಾವು ಬಳಸುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ತಮ್ಮ ಮನೆ, ಶಾಲೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತೆ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಿರದೇ ಇದನ್ನು ದಿನನಿತ್ಯ ಹಾಗೂ ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಉಮೇಶ್ ಚಲವಾದಿ ದಿಗಂಬರೇಶ್ವರ ಮಠದ ಪೀಠಾಧಿಪತಿಗಳಾದ ಕಲ್ಲಿನಾಥ ದೇವರು, ಆರ್.ಬಿ ಪಕಾಲಿ ದಶರಥ ಈಟಿ, ಪ.ಪಂ ಸಿಬ್ಬಂದಿ ಸಹಿತ ಅನೇಕರು ಉಪಸ್ಥಿತರಿದ್ದರು.