ಪ್ರತಿಭಾ ಕಾರಂಜಿ: ತಾಲ್ಲೂಕು ಮಟ್ಟಕ್ಕೆ ಆಯ್ಕೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೩೦; ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಡಿ.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ಭರಮಸಾಗರ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯ ಹಂತ-2 ಮತ್ತು ಹಂತ-3ರಲ್ಲಿ ಕೆ.ಆರ್.ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿಗಳಾದ ಎಂ.ಚAದನ ದೇಶ ಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನ, ವಿ.ಸಿಂಚನಾ ಮಿಮಿಕ್ರಿಯಲ್ಲಿ ಪ್ರಥಮ ಸ್ಥಾನ ಹಾಗೂ 6ನೇ ತರಗತಿ ವಿದ್ಯಾರ್ಥಿ ಎನ್.ಸೌಜನ್ಯ ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮಸ್ಥಾನ ಪಡೆದಿದ್ದಾರೆ.ಪ್ರೌಢಶಾಲಾ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿಗಳಾದ ಕೇಶಿನಿ ಜೆ ನಾಯಕ್ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಂ.ಎಸ್.ಫೈಜಾನ್ ಮತ್ತು ತಂಡದವರಿAದ ಕವ್ವಾಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಶಾಲೆಯ 10 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ, 5 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಶಾಲೆಗೆ ಕೀತಿ ತಂದಿದ್ದಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಹೆಚ್. ನಾಗರಾಜ್, ಸಂಗೀತ ಶಿಕ್ಷಕ ಎ.ಎಂ.ಆರ್ ಮಲ್ಲಿಕಾರ್ಜುನಯ್ಯ, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.