ಎಸ್, ಎಸ್, ‘ಎ’ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
ವಿಜಯಪುರ,ಜು.29:ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆಯನ್ನು ಮಾಡಿಕೊಳ್ಳಬೇಕು, ಆಗ ನಿಮ್ಮ ಗುರಿ ಮುಟ್ಟಲಿಕ್ಕೆ ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು
ನಗರದ ಬಿ,ಎಲ್,ಡಿ,ಇ, ಸಂಸ್ಥೆಯ ಎಸ್ ಎಸ್ ‘ಎ’ ಪ್ರೌಢಶಾಲೆಯಲ್ಲಿ 2024-25 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ ಎಸ್,ಎಸ್, ಆವರಣದ ಆಡಳಿತಾಧಿಕಾರಿ ಪ್ರೊ, ಆಯ್. ಎಸ್, ಕಾಳಪ್ಪನವರ ಮಾತನಾಡಿ, ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಕೂಡಾ ಬಹಳ ಮುಖ್ಯ. ಆದ್ದರಿಂದ ತಮ್ಮ ಕಲಿಕೆಯಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಜೀವನವು ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು.
ಕ್ರೀಡಾ ವಿಭಾಗ ಉದ್ಘಾಟಕರಾಗಿ ಆಗಮಿಸಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿÀ ಎ,ಎಸ್, ಲಾಳಸೇರಿ ಅವರು ಮಾತನಾಡಿ, ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖ ಇದ್ದ ಹಾಗೆ. ಇದರಿಂದ ವಿದ್ಯಾರ್ಥಿಗಳು ಶಾರೀರಿಕವಾಗಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿ ಬೆಳೆಯುತ್ತಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಬಿ. ಎಲ್. ಡಿ. ಇ. ಸಂಸ್ಥೆಯ ಅಧೀಕ್ಷಕÀ ಎಸ್.ಎ. ಬಿರಾದಾರ (ಕನ್ನಾಳಗೌಡ್ರು), ನಗರದ ದೈಹಿಕ ಶಿಕ್ಷಣಾಧಿಕಾರಿ ಎಸ್.ಜೆ. ಬಿರಾದಾರ, ಕಾಲೇಜಿನ ಪ್ರಾಚಾರ್ಯ ಜೆ.ಡಿ. ಅಕಮಂಚಿ, ಉಪಪ್ರಾಚಾರ್ಯ ಕೆ.ಬಿ. ಪಾಟೀಲ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥೆ ಎಸ್.ಬಿ. ನಾಲವಾರ, ಕ್ರೀಡಾ ವಿಭಾಗದ ಮುಖ್ಯಸ್ಥ ಕೆ. ವಿ. ಒಡೆಯರ ಮತ್ತು ಶಾಲೆಯ ಎಲ್ಲಾ ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಟಿ. ಆರ್. ಜಾನಕರ್ ಮತ್ತು ಎನ್. ಎಲ್. ರಾಠೋಡ ನಿರೂಪಿಸಿದರು, ಡಿ. ಕೆ. ರಾಠೋಡ ಸ್ವಾಗತಿಸಿದರು, ಎಸ್. ಡಿ. ಕೂಡವಕ್ಕಲಿಗಿ ಪರಿಚಯಿಸಿದರು, ಎಸ್. ಎಸ್. ಲಮಾಣಿ ವಂದಿಸಿದರು.