ಎಸ್‌ಸಿ, ಎಸ್‌ಟಿ ಅನುದಾನ ಬಳಕೆಗೆ ಖಂಡನೆ
ಕಲಬುರಗಿ:ಜು.29: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್‌ಸಿ, ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಚಿಂಚೋಳಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ರವಿ ಸಿಂಗೆ ಅರಣಕಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ದಲಿತರಿಗೆ ಮೀಸಲ್ಲಿಟ್ಟಿರುವ ಎಸ್‌ಸಿಪಿ-ಟಿಎಸ್‌ಪಿ ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಲ್ಲದೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇ.60ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೊತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದ್ದು ಇಂದರಿAದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.ರಾಜ್ಯ ಸರಕಾರ
ಗ್ಯಾರಂಟಿ ಯೋಜನೆಯ ಜಾರಿಯಿಂದ ಎದುರಾಗಿರುವ ಆರ್ಥಿಕ ಹೊಡೆತದಿಂದ ತಪ್ಪಿಸಿಕೊಳ್ಳಲು ಪರಿಶಿಷ್ಟ, ಶೋಷಿತ ಸಮುದಾಯದ ಅಭಿವೃದ್ಧಿಗೆ ಮೀಸಲಿರಿಸಿರುವ ಎಸ್.ಸಿ.ಎಸ್.ಪಿ ಟಿಎಸ್.ಪಿ ಯೋಜನೆಯ ಹಣವನ್ನು ಬಳಸಿಕೊಳ್ಳುತ್ತಿದೆ ಎಂದರು.ಅಲ್ಲದೇ, ಎಸ ಎಸ ಎಲಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಸಹ ನಿಲ್ಲಿಸಿರುವುದು ಖಂಡನೀಯ ಎಂದರು. ಗ್ಯಾರಂಟಿ ಯೋಜನೆಗೆ ರೂ. 52 ಸಾವಿರ ಕೋಟಿ ಮೀಸಲಿರಿಸಿದ್ದೇವೆ ಎಂದು ಬೆನ್ನು ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣಕ್ಕೆ ಕೈ ಹಾಕಿರುವುದು ವಿಪರ್ಯಾಸ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಎಷ್ಟು ಕಾಲೇಜುಗಳಲ್ಲಿ ಜಾರಿ ಮಾಡಲಾಗಿದೆ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.