ಹಿರಿಯ ಪತ್ರಕರ್ತರಾದ ಚೂಡಾನಾಥ ಐಯ್ಯರ್ ಅಗಲಿಕೆಗೆ ಸಂತಾಪ
ಸಂಜೆವಾಣಿ ವಾರ್ತೆ
ಬಾಳೆಹೊನ್ನೂರು.ಜು.೨೯; ಹಿರಿಯ ಪತ್ರಕರ್ತ ಚೂಡಾನಾಥ ಐಯ್ಯರ್ ಅಗಲಿಕೆಗೆ  ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.ಐದು ದಶಕಗಳಿಂದ ಚಿಕ್ಕಮಗಳೂರಿನಲ್ಲಿ ಪತ್ರಕರ್ತರಾಗಿ ಸಲ್ಲಿಸಿರುವ ಚೂಡಾನಾಥ ಐಯ್ಯರ್ ಅವರು ತಮ್ಮ ತೀಕ್ಷ÷್ಣ ಬರಹಗಳಿಂದ ಸಮಾಜದ ಓರೆ ಕೋರೆಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದನ್ನು ಮರೆಯಲಾಗದು. ಶ್ರೀ ಜಗದ್ಗುರು ರಂಭಾಪುರಿ ಪೀಠದ ಕುರಿತು ಅವರು ಉತ್ತಮ ವರದಿಗಳನ್ನು ಮಾಡಿದ್ದರು. ಇತ್ತೀಚೆಗೆ ಅವರಿಗೆ ಚಿಕ್ಕೊಳಲೆ ಸದಾಶಿವ ಪತ್ರಿಕೋದ್ಯಮ ಪ್ರಶಸ್ತಿ ನೀಡಿ ಆಶೀರ್ವದಿಸಿದ ನೆನಪು ಇನ್ನೂ ಹಸಿರಾಗಿದೆ. ಶ್ರೀ ಜಗದ್ಗುರುಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಅವರ ಅಗಲಿಕೆ ನೋವನ್ನುಂಟು ಮಾಡಿದೆ. ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.