ಮುಂಗಾರು ಹಂಗಾಮಿನ ಬಿತ್ತನೆ
ಯಾದಗಿರಿ:ಜು.28:2024-25 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಿಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 118616 ಹೆಕ್ಟರ್ ಪ್ರದೇಶದ ಬಿತ್ತನೆ ಗುರಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಈವರೆಗೆ 104005 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ. ಅಂದರೆ ಶೇ% 87.68 ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ. 4711 ಹೆಕ್ಟರ್ ಪ್ರದೇಶದಲ್ಲಿ ಹತ್ತಿ, 28500 ಹೆಕ್ಟರ್ ಪ್ರದೇಶದಲ್ಲಿ ತೊಗರಿ, 15054 ಹೆಕ್ಟರ್ ಪ್ರದೇಶದಲ್ಲಿ ಹೆಸರು ಹಾಗೂ 12740 ಹೆಕ್ಟರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಈವರೆಗಿನ ವಾಡಿಕೆ ಮಳೆ 325 ಮಿ.ಮೀ. ಇದ್ದು, ಅದರಲ್ಲಿ ಈಗಾಗಲೇ 310 ಮಿ.ಮೀ. ಮಳೆಯಾಗಿರುತ್ತದೆ. ಕಳೆದ ಒಂದು ವಾರದಿಂದ ಸತತವಾಗಿ ತುಂತುರು ಮಳೆ ಬರುತ್ತಿದ್ದು. ಬಿತ್ತನೆಯಾದ ತೊಗರಿ ಹಾಗೂ ಹೆಸರಿನ ಬೆಳೆಗಳು ಚೇತರಿಸಿಕೊಳ್ಳುತ್ತೀವೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ.