ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳ ನೇಮಕ
ವಿಜಯಪುರ,ಜು.28: ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಅನುಕೂಲವಾಗುವಂತೆ, ತುರ್ತು ಸಂದರ್ಭಗಳಲ್ಲಿ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಸೇರಿದಂತೆ ರಕ್ಷಣಾ ಕಾರ್ಯ ಕೈಗೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆವರು ಆದೇಶ ಹೊರಡಿಸಿದ್ದಾರೆ.
ಭೀಮಾ ಹಾಗೂ ಕೃಷ್ಣಾ ನದಿ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಾಲೂಕಾ ನೊಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಆದೇಶಿಸಲಾಗಿದೆ.
ವಿಜಯಪುರ ತಾಲೂಕಿಗೆ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮೊ: 9739582619, ಬಬಲೇಶ್ವರ ತಾಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ಪೂಜಾರಿ ಮೊ: 9844849238, ತಿಕೋಟಾ ತಾಲೂಕಿಗೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ್‌ಕುಮಾರ ಭಾವಿದೊಡ್ಡಿ ಮೊ: 9448999232, ಬಸವನಬಾಗೇವಾಡಿ ತಾಲೂಕಿಗೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ಮೊ: 9448392005, ಕೊಲ್ಹಾರ ತಾಲೂಕಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ ಮೊ: 9448544086, ನಿಡಗುಂದಿ ತಾಲೂಕಿಗೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಮೊ: 8861308444, ಮುದ್ದೇಬಿಹಾಳ ತಾಲೂಕಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಜಿಸ್ಟಾçರ್ ಶಂಕರಗೌಡ ಸೋಮನಾಳ ಮೊ: 9448336439, ತಾಳಿಕೋಟೆ ತಾಲೂಕಿಗೆ ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಮೊ: 9448776663, ಇಂಡಿ ತಾಲೂಕಿಗೆ ಭೂದಾಖಲೆಗಳ ಉಪನಿರ್ದೇಶಕ ಮಹಾಂತೇಶ ಮುಳಗುಂದ ಮೊ: 9742971570, ಚಡಚಣ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಮೊ: 9844850411, ಸಿಂದಗಿ ತಾಲೂಕಿಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯ ಪಾಟೀಲ ಮೊ: 8951420399, ದೇವರಹಿಪ್ಪರಗಿ ತಾಲೂಕಿಗೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪಾ ಗೋಠೆ ಮೊ: 9480857004 ಹಾಗೂ ಆಲಮೇಲ ತಾಲೂಕಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ ಮೊ: 9008878089 ಇವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಅಧಿಕಾರಿಗಳು ಪ್ರವಾಹ ಸಂದರ್ಭದಲ್ಲಿ 24 ಗಂಟೆಯೂ ಸಂಬAಧಿಸಿದ ಗ್ರಾಮದಲ್ಲಿ ಹಾಜರಿದ್ದು, ಪ್ರತಿ ದಿನ ಗ್ರಾಮದ ಪರಿಸ್ಥಿತಿ ಕುರಿತು ಮಾಹಿತಿ ನೀಡಿ, ಪರಿಹಾರ ಕಾರ್ಯ ಕೈಗೊಳ್ಳಬೇಕು. ಪ್ರಕೃತಿ ವಿಕೋಪ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.