ನಕಲಿ ಕ್ಲಿನಿಕ್‌ಗಳ ಮೇಲೆ ವೈದ್ಯಾಧಿಕಾರಿಗಳಿಂದ ದಿಢೀರ್ ದಾಳಿ, ಪರಿಶೀಲನೆ
ಯಾದಗಿರಿ : ಜು.೨೮: ಸುರಪುರ ತಾಲೂಕಿನ ದಂಡ ಸೋಲಾಪುರ (ಚಾಮನಾಳ) ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳಿಂದ ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿ ನಕಲಿ ವೈದ್ಯ ಕಿರಣ ಇವರನ್ನು ಕೆಪಿಎಮ್‌ಇಎ ಕಾಯ್ದೆ ಪ್ರಕಾರ ಇವರ ವಿರುದ್ಧ ಕ್ರಮ ಜರುಗಿಸಿ ಆಸ್ಪತ್ರೆಗೆ ಬೀಗಮುದ್ರೆ ಹಾಕಿದ್ದಾರೆ.
ಇನ್ನೂ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡಿ ಕೆಪಿಎಮ್‌ಇಎ ಕಾಯ್ದೆ ಪ್ರಕಾರ ಆಸ್ಪತ್ರೆಯನ್ನು ನಿರ್ವಹಿಸಿರುವುದಿಲ್ಲ. ಇವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾಯ್ದೆ ಪ್ರಕಾರ ನಿಯಮ ಪಾಲಿಸದಿದ್ದಲ್ಲಿ ಅಂತಹ ಆಸ್ಪತ್ರೆಗಳಿಗೆ ಬೀಗಮುದ್ರೆ ಹಾಕಲಾಗುವುದು ಎಂದು ಎಚ್ಚರಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಕೆಪಿಎಮ್‌ಇಎ ಕಾಯ್ದೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಜ್ಯೋತಿ ಕಟ್ಟಿಮನಿ, ಸುರಪುರ ತಾಲೂಕು ವೈದ್ಯಾಧಿಕಾರಿ ಡಾ.ಆರ್ ವಿ ನಾಯಕ, ಶಹಾಪುರ ತಾಲೂಕು ವೈದ್ಯಾಧಿಕಾರಿ ರಮೇಶ ಗುತ್ತೇದಾರ ಹಾಗೂ ಆರೋಗ್ಯ ಇಲಾಖೆಯ ಇನ್ನಿತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.