ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರ ಪ್ರವಾಸ
ಕಲಬುರಗಿ:ಜು.27:ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಅವರು ಜುಲೈ 28 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಾಗೂ ಸಾರ್ವಜನಿಕರ ಕುಂದುಕೊರತೆಯನ್ನು ವಿಚಾರಣೆ ನಡೆಸಿ, ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜುಲೈ 29 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಾಗೂ ಸಾರ್ವಜನಿಕರು ಕುಂದುಕೊರತೆಯನ್ನು ವಿಚಾರಣೆ ನಡೆಸಿ, ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜುಲೈ 30 ರಂದು ಮಂಗಳವಾರ ಕಲಬುರಗಿ ಮಹಾನಗರಪಾಲಿಕೆಯ 22ನೇ ಅವಧಿಯ ಮೇಯರ್, ಉಪ ಮೇಯರ್ ಆಯ್ಕೆಗಾಗಿ ನಡೆಯಲಿರುವ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.