ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಜು.೨೮: ಪ್ರವಾಹ ಪೀಡಿತಕ್ಕೊಳಗಾಗಬಹುದಾದ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಾಳಗಿ ಹಾಗೂ ನಿಡಗುಂದಿ ತಾಲೂಕಿನ ಮಸೂತಿ ಹಾಗೂ ಯಲಗೂರಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಶನಿವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು ಹೊಳೆಮಸೂತಿ ಕೆನಾಲ್ ಹತ್ತಿರ ಕೆಲವು ತಾಂತ್ರಿಕ ತೊಂದರೆಯಿAದ ನೀರು ರೈತರ ಹೊಲಗಳಿಗೆ ಹರಿಯುತ್ತಿರುವುದರಿಂದ ಸಮಸ್ಯೆಯಾಗಿರುವುದಾಗಿ ರೈತರು ದೂರು ಸಲ್ಲಿಸಿದ್ದು, ಈ ಕುರಿತು ಕೂಡಲೇ ದುರಸ್ತಿಗೊಳಿಸಿ ರೈತರಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳುವಂತೆ ಈಗಾಗಲೇ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಮನೆ ಹಾನಿ,ಜನ, ಜಾನುವಾರು ಹಾನಿಗೆ ಪರಿಹಾರ ನೀಡಲು ಅವಕಾಶವಿದ್ದು, ಅಧಿಕಾರಿಗಳ ತಂಡದಿAದ ಸೂಕ್ತ ಪರಿಶೀಲನೆ ನಡೆಸಿ, ಸರ್ವೇ ಕಾರ್ಯ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಮಹಾರಾಷ್ಟçದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ೩ ತಾಲೂಕಿನ ೧೨೦ ಕಿ.ಮಿ. ವ್ಯಾಪ್ತಿಯಲ್ಲಿ ನೀರು ಹರಿಯುತ್ತಿದೆ. ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ೫ ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ನೀರು ಹರಿಯುವುದರಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕಳೆದ ೨೦೧೯ರಲ್ಲಿ ಹೆಚ್ಚಿನ ನೀರು ಹಳ್ಳಿಗಳಲ್ಲಿ ಹರಿದು ಸಮಸ್ಯೆ ಉಂಟಾಗಿತ್ತು. ಈ ಸಲ ಅಂತಹ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳೊಂದಿಗೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಆಲಮಟ್ಟಿಗೆ ೨.೯೦ ಲಕ್ಷ ಸಾವಿರ ಕ್ಯುಸೆಕ್ ಒಳ ಹರಿವು ೩ ಲಕ್ಷ ಕ್ಯುಸೆಕ್ ಹೊರ ಹರಿವು ಇದೆ. ಹಿಂದಿನ ದಿನಕ್ಕೆ ಹೋಲಿಸಿದರೆ, ನೀರಿನ ಮಟ್ಟ ಸ್ವಲ್ಪ ಕಡಿಮೆಯಾಗಿದೆ. ನೀರಿನ ಮಟ್ಟ ಹೆಚ್ಚಾಗಲಿ, ಕಡಿಮೆಯಾಗಲಿ ತೀವ್ರ ನಿಗಾ ಸಹ ಇಡಲಾಗಿದೆ. ಸಾರ್ವಜನಿಕರು ಸಹ ಮುಂಜಾಗ್ರತಾ ಕ್ರಮ ಪಾಲಿಸಿಕೊಂಡು ಎಚ್ಚರಿಕೆಯಿಂದಿರಲು ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮುದ್ದೇಬಿಹಾಳ ತಾಲೂಕಿನ ಉಸ್ತುವಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಶೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.