ಕಾರ್ಮಿಕನ ಅನುಮಾನಾಸ್ಪದ ಸಾವು
ಕಲಬುರಗಿ,ಜು.27-ಪಟ್ಟಣದ ಓರಿಯಂಟಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಪ್ರಗತಿ ಕಾಲೋನಿಯಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ಪಟ್ಟಣದ ಸಾಸರಗಂಜ್ ಕಾಲೋನಿ ನಿವಾಸಿ ಶರೀಫ್ ನಿಜಾಮುದ್ದಿನ್ (22) ಎಂದು ಗುರುತಿಸಲಾಗಿದೆ.
ನಿನ್ನೆ ಮಧ್ಯಾಹ್ನ ಹೋದವನು ರಾತ್ರಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದು ಸಹಜ ಸಾವಲ್ಲ ಕೊಲೆ ಎಂದು ಮೃತನ ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.