ಸಿಎಂ ಜನಸ್ಪಂದನ ಸಭೆ: ಸಚಿವರಿಂದ ಸ್ಥಳ ಪರಿಶೀಲನೆ
ಕಲಬುರಗಿ: ಜು.27:ಬರುವ ಆಗಸ್ಟ್ ತಿಂಗಳಲ್ಲಿ ಕಲಬುರಗಿ ನಗರದ ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುನಿರೀಕ್ಷಿತ ಜನಸ್ಪಂದನ ಸಭೆ ಕೈಗೊಳ್ಳುತ್ತಿರುವ ಪ್ರಯುಕ್ತ ಜಿಲ್ಲಾಉಸ್ತುವಾರಿ ಸಚಿವ ಪ್ರಿಯಾಂಕ್‌ಖರ್ಗೆ ಇಂದಿಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಬೆಂಗಳೂರಿನಿAದ ನೇರವಾಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಶ್ವವಿದ್ಯಾಲಯ ಆವರಣಕ್ಕೆ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್‌ಖರ್ಗೆ ಸಭೆಯಲ್ಲಿ ಅಹವಾಲುಗಳೊಂದಿಗೆ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಫೌಜಿಯಾತರನ್ನುಮ್‌ಅವರಿಗೆ ನಿರ್ದೇಶನ ನೀಡಿದರು.
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದ ಬಹುತೇಕಎಲ್ಲ ಜಿಲ್ಲೆಗಳ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಈ ವೇಳೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಸಮಗ್ರ ರೂಪುರೇಷೆ ಸಿದ್ದಪಡಿಸಬೇಕೆಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ ಮತ್ತು ಜೀವನೋಪಾಯಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಹ ಇದೇ ವೇಳೆ ಕೆಲವು ಸಲಹೆಗಳನ್ನು ನೀಡಿದರು.
ಈ ವೇಳೆ ಪೂರ್ವಸಿದ್ಧತೆ ಕುರಿತು ಸಚಿವರಿಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜನರ ಅಹವಾಲುಗಳನ್ನು ಮೊದಲು ನೋಂದಣಿ ಮಾಡಿಕೊಳ್ಳಲಾಗುವುದು.ಆ ಬಳಿಕ ಸಂಬAಧಿಸಿದ ಇಲಾಖೆಯ ಮಳಿಗೆಗೆ ಅರ್ಜಿಗಳನ್ನು ರವಾನಿಸಲಾಗುವುದು.ಆಯಾಇಲಾಖೆಯ ಮುಖ್ಯಸ್ಥರುಮುಖ್ಯಮಂತ್ರಿಗಳಿಗೆ ದೂರುಗಳ ಕುರಿತು ಅಗತ್ಯ ಮಾಹಿತಿ ನೀಡಲಿದ್ದಾರೆಎಂದರು.
ಇನ್ನು, ನೂಕುನುಗ್ಗಲು ಉಂಟಾಗದAತೆ ಶಿಸ್ತುಬದ್ಧ ಪ್ರವೇಶಾವಕಾಶ, ಭದ್ರತೆ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೂಅಗತ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಅಧ್ಯಕ್ಷ ಮಜರ್ ಆಲಂ ಖಾನ್, ಐಜಿಪಿ ಅಜಯ್ ಹಿಲೊರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ಭಂವರ್‌ಸಿAಗ್ ಮೀನಾ, ಕಲಬುರಗಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್, ಡಿಸಿಪಿ ಕನಿಕಾ ಸಿಕ್ರಿವಾಲ್, ಅಪರಜಿಲ್ಲಾಧಿಕಾರಿರಾಯಪ್ಪ ಹುಣಸಗಿ, ತಹಸೀಲ್ದಾರ್ ನಾಗಮ್ಮಕಟ್ಟಿಮನಿ ಸೇರಿದಂತೆಇನ್ನಿತರರು ಉಪಸ್ಥಿತರಿದ್ದರು.