ತುಂಗಭದ್ರ ನದಿಪಾತ್ರದ ಜನರು ಎಚ್ಚರವಹಿಸುವಂತೆ  ಸೂಚನೆ
ಬಳ್ಳಾರಿ,ಜು.27- ತುಂಗಭದ್ರಾ ಜಲಾಶಯವು  ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಜಲಾಶಯದಿಂದ  ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಕಂಪ್ಲಿಯ ಕೋಟೆ ಪ್ರದೇಶದ ಬಳಿ ಭೇಟಿ ನೀಡಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು
 ಜಲಾಶಯದಿಂದ  ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ನದಿಭಾಗ ಗ್ರಾಮದ ಜನರು ನದಿಪಾತ್ರಕ್ಕೆ ತೆರಳಬಾರದು  ಕಂಪ್ಲಿ ಮತ್ತು ಗಂಗಾವತಿ ಸಂಪರ್ಕ ಸಂಚಾರ ನಿರ್ಬಂಧಿಸಿದ್ದು. ಪರ್ಯಾಯವಾಗಿ ಬುಕ್ಕಸಾಗರ ಸೇತುವೆ ಮೂಲಕ ಸಂಚರಿಸಬಹುದು.
ನೂತನ ಸೇತುವೆ ನಿರ್ಮಾಣದ ಕುರಿತು ಸ್ಥಳೀಯ ಶಾಸಕರ ಜೊತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.
ಕಂಪ್ಲಿಯಲ್ಲಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಪಂ ವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನದಿಯ ಅಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ಜತನು ಮಾಡಿಕೊಳ್ಳುವಂತೆ  ಸೂಚಿಸಿದ್ದಾರೆ.