ಮಂಗಳೂರು: ಹೊತ್ತಿ ಉರಿದ ಕಾರು

ಮಂಗಳೂರು :ರಾಷ್ಟ್ರೀಯ ಹೆದ್ದಾರಿ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಬಳಿ ಕಾರೊಂದು ಶನಿವಾರ ಹಠಾತ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಈ ಕಾರು ದೆಹಲಿ ನೋಂದಾಯಿತವಾಗಿತ್ತು. ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡು, ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ
ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕೆಲ ಹೊತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.